ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆರಿಗೆ ಪಾಲು; ಕಾಂಗ್ರೆಸ್-ಬಿಜೆಪಿ ಸಂಘರ್ಷ ತೀವ್ರ

Published 6 ಏಪ್ರಿಲ್ 2024, 15:43 IST
Last Updated 6 ಏಪ್ರಿಲ್ 2024, 15:43 IST
ಅಕ್ಷರ ಗಾತ್ರ

ಬೆಂಗಳೂರು: ತೆರಿಗೆ ಪಾಲು ಮತ್ತು ಅನುದಾನದ ಹಂಚಿಕೆಯಲ್ಲಿ ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ ಎಂಬ ಕೂಗನ್ನು ರಾಜ್ಯ ಸರ್ಕಾರವೇ ಎಬ್ಬಿಸಿದೆ. ಅನ್ಯಾಯ ಮಾಡಿಲ್ಲ; ನ್ಯಾಯಯುತ ಪಾಲು ನೀಡಲಾಗಿದೆ ಎಂದು ಬಿಜೆಪಿ ಪ್ರತಿಪಾದಿಸುತ್ತಿದೆ. 

ಈ ವಿಷಯದಲ್ಲಿ ರಾಜ್ಯ ಮತ್ತು ಕೇಂದ್ರದ ವಾದವನ್ನು ಒಂದೇ ವೇದಿಕೆಯಲ್ಲಿ ಆಲಿಸುವುದಕ್ಕಾಗಿ ಜಾಗೃತ ಕರ್ನಾಟಕ ಹಾಗೂ ರೈತ ಸಂಘಟನೆಗಳು ಶನಿವಾರ ಬಹಿರಂಗ ಚರ್ಚೆ ಹಮ್ಮಿಕೊಂಡಿದ್ದವು. ಕೇಂದ್ರದಿಂದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮತ್ತು ರಾಜ್ಯ ಕಂದಾಯ ಸಚಿವ ಕೃಷ್ಣ ಬೈರೇಗೌಡರಿಗೆ ಆಹ್ವಾನ ನೀಡಲಾಗಿದೆ ಎಂದು ಸಂಘಟಕರು ಹೇಳಿದ್ದರು.

ಬಹಿರಂಗ ಚರ್ಚೆಯಲ್ಲಿ ಭಾಗವಹಿಸದ ನಿರ್ಮಲಾ, ಅದಕ್ಕೂ ಮೊದಲೇ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ತೆರಿಗೆ ಪಾಲು, ಅನುದಾನದ ಹಂಚಿಕೆ ಸೇರಿದಂತೆ ಹಲವು ವಿಷಯಗಳ ಕುರಿತ ಮಾಹಿತಿ ನೀಡಿದರು.ಕೃಷ್ಣ ಬೈರೇಗೌಡ ಬಹಿರಂಗ ಚರ್ಚೆಯಲ್ಲಿ ರಾಜ್ಯದ ವಾದ ಮಂಡಿಸಿದರು. ನಿರ್ಮಲಾ ಅವರಿಗಾಗಿ ಕಾಯ್ದಿರಿಸಿದ್ದ ಕುರ್ಚಿಯನ್ನು ಕೊನೆಯವರೆಗೂ ಖಾಲಿ ಇತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT