ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕ ಟಿ.ಬಿ. ಜಯಚಂದ್ರ ದೆಹಲಿ ವಿಶೇಷ ಪ್ರತಿನಿಧಿ

Published 3 ಜುಲೈ 2023, 22:05 IST
Last Updated 3 ಜುಲೈ 2023, 22:05 IST
ಅಕ್ಷರ ಗಾತ್ರ

ಬೆಂಗಳೂರು: ಕಾಂಗ್ರೆಸ್‌ ಶಾಸಕ ಟಿ.ಬಿ.ಜಯಚಂದ್ರ ಅವರನ್ನು ನವದೆಹಲಿಯಲ್ಲಿನ ಕರ್ನಾಟಕ ರಾಜ್ಯದ ವಿಶೇಷ ಪ್ರತಿನಿಧಿಯನ್ನಾಗಿ ನೇಮಿಸಲಾಗಿದೆ.

ಇವರಿಗೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ಮತ್ತು ಎಲ್ಲ ಸೌಲಭ್ಯಗಳನ್ನು ನೀಡಿ ಆದೇಶ ಹೊರಡಿಸಲಾಗಿದೆ.

ಎನ್‌.ಭೋಸರಾಜು ಸಭಾನಾಯಕ: ವಿಧಾನ ಪರಿಷತ್‌ನ ಸಭಾನಾಯಕರನ್ನಾಗಿ ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಸಚಿವ ಸಚಿವ ಎನ್‌.ಭೋಸರಾಜು ಅವರನ್ನು ನಾಮನಿರ್ದೇಶನ ಮಾಡಲಾಗಿದೆ. 

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಸಚಿವ ಸ್ಥಾನ ಗಿಟ್ಟಿಸಿದ ಭೋಸರಾಜು ಅವರನ್ನು ಆ ಬಳಿಕ ವಿಧಾನಪರಿಷತ್‌ ಸದಸ್ಯರನ್ನಾಗಿ ಮಾಡಲಾಯಿತು. ವಿಧಾನಪರಿಷತ್ ಸಭಾನಾಯಕರನ್ನಾಗಿ ಬೇರೆ ಹಿರಿಯ ಸಚಿವರನ್ನು ಆಯ್ಕೆ ಮಾಡಬಹುದು ಎಂಬ ಚರ್ಚೆ ಕಾಂಗ್ರೆಸ್ ಪಕ್ಷದಲ್ಲಿ ನಡೆದಿತ್ತು. ಇದೀಗ ಆ ಜವಾಬ್ದಾರಿಯೂ ಬೋಸರಾಜ ಅವರ ಹೆಗಲೇರಿದೆ.

ವಿಧಾನಪರಿಷತ್ತಿನ ಮುಖ್ಯ ಸಚೇತಕರನ್ನಾಗಿ ಸಲೀಂ ಅಹಮದ್ ಮತ್ತು ವಿಧಾನಸಭೆ ಮುಖ್ಯ ಸಚೇತಕರನ್ನಾಗಿ ರಾಮದುರ್ಗ ಶಾಸಕ ಅಶೋಕ ಎಂ.ಪಟ್ಟಣ ಅವರನ್ನು ನೇಮಕ ಮಾಡ
ಲಾಗಿದೆ. ಸಲೀಂ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿಯೂ ಕೆಲಸ ಮಾಡುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT