ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭದ್ರಾ ಮೇಲ್ದಂಡೆ ಯೋಜನೆಯ ನೀರು ಹರಿಸಿ: ಟಿ.ಬಿ.ಜಯಚಂದ್ರ

Published 4 ಸೆಪ್ಟೆಂಬರ್ 2023, 16:01 IST
Last Updated 4 ಸೆಪ್ಟೆಂಬರ್ 2023, 16:01 IST
ಅಕ್ಷರ ಗಾತ್ರ

ಬೆಂಗಳೂರು: ‘ಮುಂದಿನ ಒಂದು ವರ್ಷದಲ್ಲಿ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಪೂರ್ಣಗೊಳಿಸಿ ರೈತರಿಗೆ ನೀರು ನೀಡಬೇಕು’ ಎಂದು ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳಿಗೆ ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಸೂಚಿಸಿದರು.

ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಸಣ್ಣ ಚಿತ್ತಯ್ಯ, ಕಾನೂನು ಇಲಾಖೆಯ ಕಾರ್ಯದರ್ಶಿ ಜಗದೀಶ್ ಮತ್ತು ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳ ಜೊತೆ ಸೋಮವಾರ ಅವರು ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿದರು.

‘ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಗೆ ವೇಗ ನೀಡುವ ಸಂಬಂಧ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಶೀಘ್ರದಲ್ಲಿ ‌ಆ ಭಾಗದ ಶಾಸಕರ ಮತ್ತು ಸಂಸದರ ಸಭೆ ಕರೆಯಲಾಗುವುದು. ಕೇಂದ್ರ ಸಚಿವರಾಗಿರುವ ಶೋಭಾ ಕರಂದ್ಲಾಜೆ ಮತ್ತು ನಾರಾಯಣ ಸ್ವಾಮಿ ಜೊತೆಗೂ ದೆಹಲಿಯಲ್ಲಿ ಸಭೆ ನಡೆಸುತ್ತೇನೆ’ ಎಂದು ಅವರು ತಿಳಿಸಿದರು.

‌‘₹ 21,473 ಕೋಟಿ ವೆಚ್ಚದ ಕೇಂದ್ರದ ಈ ಯೋಜನೆಗೆ ಈ ಸಾಲಿನಲ್ಲಿ ₹ 5,300 ಕೋಟಿ ನೀಡುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಕೇಂದ್ರ ಜಲಶಕ್ತಿ ಹಾಗೂ ಕೇಂದ್ರ ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಕಳೆದ ವಾರ ಸಭೆ ನಡೆಸಿದ್ದಾರೆ’ ಎಂದು ಸಭೆಗೆ ಸಣ್ಣ ಚಿತ್ತಯ್ಯ ಮಾಹಿತಿ ನೀಡಿದರು.

‘ತರೀಕೆರೆ, ಕಡೂರು ಹಾಗು ಅಜ್ಜಂಪುರದಲ್ಲಿ 220ಕ್ಕೂ ಹೆಚ್ಚು ರೈತರು ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹೆಚ್ಚಿನ ಪರಿಹಾರ ಕೋರಿ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದಾರೆ. ಈ ಮೊಕದ್ದಮೆಗಳನ್ನು ಆದಷ್ಟು ಶೀಘ್ರವಾಗಿ ಇತ್ಯರ್ಥಪಡಿಸಿದರೆ ಯೋಜನೆಗೆ ವೇಗ ಸಿಗಲಿದೆ’ ಎಂದೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT