ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರ ಕೌನ್ಸೆಲಿಂಗ್‌ ವೇಳಾಪಟ್ಟಿ ಪ್ರಕಟ

Last Updated 6 ಅಕ್ಟೋಬರ್ 2018, 16:12 IST
ಅಕ್ಷರ ಗಾತ್ರ

ಬೆಂಗಳೂರು: 2017–18ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆಯನ್ನು ಗಣಕೀಕೃತ ಕೌನ್ಸೆಲಿಂಗ್‌ ಮೂಲಕ ನಡೆಸಲು ಪರಿಷ್ಕೃತ ವೇಳಾಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿದೆ.

ಹೆಚ್ಚುವರಿ ಶಿಕ್ಷಕರ ಮರುನಿಯೋಜನೆ, ಕಡ್ಡಾಯ ವರ್ಗಾವಣೆ ಹಾಗೂ ಕೋರಿಕೆ, ಮತ್ತು ಪರಸ್ಪರ ವರ್ಗಾವಣೆಗೆ ನಿಗದಿಪಡಿಸಿದ್ದ ದಿನವನ್ನು ಪರಿಷ್ಕರಿಸಲಾಗಿದೆ.

ಅರ್ಜಿ ಸಲ್ಲಿಕೆ ಈಗಾಗಲೇ ಪೂರ್ಣಗೊಂಡಿದ್ದು, ಹೆಚ್ಚುವರಿ ಶಿಕ್ಷಕರ ತಾತ್ಕಾಲಿಕ ಪಟ್ಟಿ ಇದೇ 8ರಂದು ಪ್ರಕಟವಾಗಲಿದೆ. 9ರಂದು ಆಕ್ಷೇಪಣೆ ಸಲ್ಲಿಸಬಹುದು. 11ರಂದು ಅಂತಿಮ ಪಟ್ಟಿ ಪ್ರಕಟಿಸಲಾಗುತ್ತದೆ. ಕೌನ್ಸೆಲಿಂಗ್‌ ಪ್ರಕ್ರಿಯೆ ‌15 ಮತ್ತು 16ರಂದು ನಡೆಯಲಿದೆ.

ಕಡ್ಡಾಯ ವರ್ಗಾವಣೆಗೆ ಇದೇ 11ರ ಒಳಗೆ ಆಕ್ಷೇಪಣೆ ಸಲ್ಲಿಸಬಹುದು. 17ರಂದು ಅಂತಿಮ ಪಟ್ಟಿ ಪ್ರಕಟಿಸಲಾಗುತ್ತದೆ. ಜಿಲ್ಲಾ ಉಪನಿರ್ದೇಶಕರ ಕಚೇರಿಗಳಲ್ಲಿ ನವೆಂಬರ್‌ 2 ಮತ್ತು 3 ರಂದು ಕೌನ್ಸೆಲಿಂಗ್‌ ನಡೆಯಲಿದೆ.

ಕೋರಿಕೆ ಹಾಗೂ ಪರಸ್ಪರ ವರ್ಗಾವಣೆಯ ಆದ್ಯತಾ ಪಟ್ಟಿ ಇದೇ 10ರಂದು ಪ್ರಕಟವಾಗಲಿದೆ. ಆಕ್ಷೇಪಣೆಗಳನ್ನು 12ರ ಒಳಗೆ ಸಲ್ಲಿಸಬೇಕು. ವರ್ಗಾವಣೆ ತಂತ್ರಾಂಶದಲ್ಲಿ ಮಾಹಿತಿ ಅನುಮೋದಿಸಿ ದೃಢೀಕೃತ ದಾಖಲೆಗಳನ್ನು ಉಪನಿರ್ದೇಶಕರಿಗೆ ಸಲ್ಲಿಸಲು 16 ಕೊನೆ ದಿನ ಎಂದು ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT