ಬೆಂಗಳೂರು: ಹಲವು ತಿಂಗಳುಗಳಿಂದ ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಶೀಘ್ರದಲ್ಲಿಯೇ ಈ ಪ್ರಕ್ರಿಯೆ ಪ್ರಾರಂಭಿಸುವುದಾಗಿ ಸರ್ಕಾರ ಶುಕ್ರವಾರ ತಿಳಿಸಿದೆ.

ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) ಕಾಯ್ದೆಗೆ ತಿದ್ದುಪಡಿ ತಂದ ಸಚಿವ ಸಂಪುಟದ ನಿರ್ಣಯವನ್ನು ರಾಜ್ಯಪಾಲರು ಅನುಮೋದಿಸಿದ್ದು, ಈ ಕುರಿತಂತೆ ಗುರುವಾರ ಅಧಿಕೃತ ರಾಜ್ಯಪತ್ರವನ್ನು ಸರ್ಕಾರ ಪ್ರಕಟಿಸಿದೆ.

2019-20ನೇ ಸಾಲಿನಲ್ಲಿ ಕಡ್ಡಾಯ-ಹೆಚ್ಚುವರಿ ವರ್ಗಾವಣೆಗೊಳಗಾದ ಶಿಕ್ಷಕರಿಗೆ ಒಂದು ಬಾರಿ ವಿಶೇಷ ಅವಕಾಶ ನೀಡಬೇಕು. ಅಲ್ಲದೆ, ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ತಾಲ್ಲೂಕು ಅಥವಾ ಜಿಲ್ಲೆಯಲ್ಲಿ ಲಭ್ಯವಿರುವ ಹುದ್ದೆಗಳಿಗೆ ಮೊದಲ ಆದ್ಯತೆಯ ವರ್ಗಾವಣೆ ಅವಕಾಶವನ್ನು ನೀಡಲು ಸುಗ್ರೀವಾಜ್ಞೆಯಲ್ಲಿ ಅವಕಾಶವನ್ನು ಕಲ್ಪಿಸಲಾಗಿದೆ.

'ವರ್ಗಾವಣೆ ಕೋರಿ ಸಲ್ಲಿಕೆಯಾಗಿರುವ ಸುಮಾರು 72,000 ಅರ್ಜಿಗಳನ್ನು ಶಿಕ್ಷಕ ಮಿತ್ರ ಆ್ಯಪ್ ಮೂಲಕವೇ ನಿರ್ವಹಿಸಿ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ಸಂಪೂರ್ಣ ಆನ್‌ಲೈನ್ ಮೂಲಕವೇ ಮಾಡಬೇಕು' ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

'ಯಾವುದೇ ಕಾರಣಕ್ಕೂ ಶಿಕ್ಷಕರು ಭೌತಿಕವಾಗಿ ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬಾರದು. ಇಡೀ ಪ್ರಕ್ರಿಯೆಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ' ಎಂದು ಸಚಿವರು ಹೇಳಿದ್ದಾರೆ.

‘ಕಡ್ಡಾಯ-ಹೆಚ್ಚುವರಿ ವರ್ಗಾವಣೆಯಿಂದ ಸುಮಾರು 3,500 ಶಿಕ್ಷಕರು ತೀವ್ರ ಸಂಕಷ್ಟಕ್ಕೊಳಗಾಗಿದ್ದು, ಮಾನವೀಯ ನೆಲೆಗಟ್ಟಿನಲ್ಲಿ ಅವರಿಗೆ ಅವಕಾಶ ಕಲ್ಪಿಸಲಾಗುವುದು’ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.