ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆಯು ನಡೆಸುತ್ತಿರುವ ಆರು ಸರ್ಕಾರಿ ಕಿರಿಯ ತಾಂತ್ರಿಕ ಶಾಲೆಗಳನ್ನು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಗೆ ಹಸ್ತಾಂತರಿಸಿ ರಾಜ್ಯ ಸರ್ಕಾರವು ಆದೇಶಿಸಿದೆ.

ಭದ್ರಾವತಿ, ಬಳ್ಳಾರಿ, ಕಲಬುರಗಿ, ಹುಬ್ಬಳ್ಳಿ, ಮಂಗಳೂರು, ಬಾಗಲಕೋಟೆಗಳಲ್ಲಿ ಸರ್ಕಾರಿ ಕಿರಿಯ ತಾಂತ್ರಿಕ ಶಾಲೆಗಳಿವೆ. ಇಲ್ಲಿ 8, 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲಾ ಪಠ್ಯಕ್ರಮದ ಜತೆಗೆ ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್, ಫಿಟ್ಟರ್, ಕಾರ್ಪೆಂಟರಿ ಮತ್ತು ಟರ್ನರ್ ಕೌಶಲಗಳನ್ನು ಹೇಳಿಕೊಡಲಾಗುತ್ತಿದೆ.

‘ಈ ಶಾಲೆಗಳ ಸಾಮಾನ್ಯ ಪಠ್ಯಕ್ರಮವನ್ನು ಶಾಲಾ ಶಿಕ್ಷಣ ಇಲಾಖೆ ಮತ್ತು ತಾಂತ್ರಿಕ ವಿಷಯಗಳ ಪಠ್ಯಕ್ರಮವನ್ನು ತಾಂತ್ರಿಕ ಶಿಕ್ಷಣ ಇಲಾಖೆಯು ಸಿದ್ಧಪಡಿಸುತ್ತವೆ. ಈ ಶಾಲೆಗಳನ್ನು ಕೌಶಲ್ಯಾಭಿವೃದ್ಧಿ ಇಲಾಖೆಗೆ ಹಸ್ತಾಂತರಿಸಿದರೆ ಪಠ್ಯಕ್ರಮ ಮತ್ತು ನಿರ್ವಹಣೆಗೆ ಅನುಕೂಲವಾಗುತ್ತದೆ’ ಎಂದು ಕರ್ನಾಟಕ ಕೌಶಲ ಅಭಿವೃದ್ಧಿ ಪ್ರಾಧಿಕಾರವು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿತ್ತು. ಅದನ್ನು ಪರಿಗಣಿಸಿ, ಸರ್ಕಾರವು ಈ ನಿರ್ಧಾರ ತೆಗೆದುಕೊಂಡಿದೆ.

ಮೇಲಿನ ಆರೂ ಶಾಲೆಗಳಿಗೆ ಒಟ್ಟು 225 ಹುದ್ದೆಗಳು ಮಂಜೂರಾಗಿದ್ದು, 54 ಹುದ್ದೆಗಳು ಭರ್ತಿಯಾಗಿವೆ. ಈ ಶಾಲೆಗಳ ಎಲ್ಲ ಸಂಪನ್ಮೂಲಗಳನ್ನು ಕೌಶಲ್ಯಾಭಿವೃದ್ಧಿ ಇಲಾಖೆಗೆ ಹಸ್ತಾಂತರಿಸಲಾಗುತ್ತದೆ. ಸಿಬ್ಬಂದಿಯು ನೂತನ ಇಲಾಖೆಗೆ ಹೋಗಬಹುದು ಅಥವಾ ಮಾತೃ ಇಲಾಖೆಯಲ್ಲಿಯೇ ಉಳಿಯಬಹುದು ಎಂದು ಉನ್ನತ ಶಿಕ್ಷಣ ಇಲಾಖೆ (ತಾಂತ್ರಿಕ ಶಿಕ್ಷಣ) ತನ್ನ ಆದೇಶದಲ್ಲಿ ವಿವರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.