ಬೆಂಗಳೂರು: ಆಧುನಿಕ ತಂತ್ರಜ್ಞಾನವನ್ನು ಬಳಸಿ ಎಸಗುವ ಅಪರಾಧಗಳನ್ನು ತಡೆಯಲು ಪೊಲೀಸ್ ಇಲಾಖೆ ಉನ್ನತ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬೇಕು. ಇದಕ್ಕೆ ಅಗತ್ಯವಿರುವ ಎಲ್ಲ ನೆರವನ್ನು ಸರ್ಕಾರ ನೀಡಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ವಿಧಾನಸೌಧದ ಬಾಂಕ್ವೆಟ್ ಹಾಲ್‌ನಲ್ಲಿ ಸೋಮವಾರ ನಡೆದ ಮುಖ್ಯಮಂತ್ರಿಗಳ ಪೊಲೀಸ್ ಪದಕ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅಪರಾಧಿಗಳು ತಮ್ಮ ಚಟುವಟಿಕೆಗಳಿಗೆ ತಂತ್ರಜ್ಞಾನ ಬಳಸುತ್ತಿದ್ದಾರೆ. ಅದನ್ನು ತಡೆಯಲು ಹಿರಿಯ ಅಧಿಕಾರಿಗಳು ಉನ್ನತ ತಂತ್ರಜ್ಞಾನ ಬಳಸಬೇಕು. ಇದಕ್ಕಾಗಿ ಅಗತ್ಯ ತರಬೇತಿ ಪಡೆದು ಕಿರಿಯ ಅಧಿಕಾರಿಗಳಿಗೆ ಮಾರ್ಗದರ್ಶನ ಮಾಡಬೇಕು ಎಂದು ಅವರು ಹೇಳಿದರು.

ವಿಶೇಷವಾಗಿ ಸೈಬರ್ ಕ್ರೈಂ, ಹ್ಯಾಕರ್ಸ್, ಡಾರ್ಕ್ ನೆಟ್ ಇತ್ಯಾದಿ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿವೆ. ಇತ್ತೀಚಿನ ದಿನಗಳಲ್ಲಿ ಸರ್ಕಾರ ಇಲಾಖೆಗಳ ವೆಬ್‌ಸೈಟ್‌ಗಳನ್ನು ಹ್ಯಾಕ್ ಮಾಡಲಾಗುತ್ತಿದೆ. ಇದನ್ನು ತಡೆಯಲು ಆಧುನಿಕ ತಂತ್ರಜ್ಞಾನ ಹೊಂದುವುದು ಅಗತ್ಯ ಎಂದು ಅವರು ಪ್ರತಿಪಾದಿಸಿದರು. ‘ಕರ್ನಾಟಕ ಪೊಲೀಸರು ದಕ್ಷತೆ, ಪ್ರಾಮಾಣಿಕತೆ ಮತ್ತು ಕಾರ್ಯಕ್ಷಮತೆಗೆ ದೇಶದಲ್ಲೇ ಹೆಸರುವಾಸಿ ಈ ಹೆಮ್ಮೆಯನ್ನು ಕಾಪಾಡಿಕೊಂಡು ಹೋಗಬೇಕು. ಪ್ರತಿ ದಿನವೂ ಸವಾಲುಗಳು.ಯಾವ ಸಂದರ್ಭದಲ್ಲಿ ಏನು ನಡೆಯುತ್ತದೆ ಎಂಬುದನ್ನು ಹೇಳಲು ಆಗುವುದಿಲ್ಲ. ಯಾವುದೇ ಸನ್ನಿವೇಶ ಎದುರಾದರೂ ಸನ್ನದ್ಧರಾಗಿಬೇಕು. ನಮ್ಮ ಸರ್ಕಾರ ಹಿಂದಿನ ಯಾವುದೇ ಸರ್ಕಾರ ನೀಡದಷ್ಟು ಸೌಲಭ್ಯಗಳನ್ನು ನೀಡಿದೆ. ಸರ್ಕಾರಕ್ಕೆ ಹೆಮ್ಮೆ ತರುವ ಕೆಲಸ ಮಾಡಬೇಕು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.