ಬೆಂಗಳೂರು: ಈ ದೇಶದ ಏಳಿಗೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ಎಸ್ಎಸ್) ನೀಡಿದ ಕನಿಷ್ಠ ಹತ್ತು ಕೊಡುಗೆಗಳನ್ನು ಸಂಸದ ಜಗದೀಶ ಶೆಟ್ಟರ್ ಅವರು ತಿಳಿಸಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ.

ಜಗದೀಶ ಶೆಟ್ಟರ್ ಅವರು ಇತ್ತೀಚೆಗೆ ಹೇಳಿದ್ದ ಆರ್ಎಸ್ಎಸ್ ಇಲ್ಲದಿದ್ದರೆ ಭಾರತ ಮುಸ್ಲಿಂ ರಾಷ್ಟ್ರ ಆಗುತ್ತಿತ್ತು ಎಂಬ ಹೇಳಿಕೆಗೆ ಪ್ರಿಯಾಂಕ್ ತಿರುಗೇಟು ನೀಡಿದ್ದಾರೆ. ಈ ಕುರಿತ ಪೋಸ್ಟ್ ಅನ್ನು ಎಕ್ಸ್ನಲ್ಲಿ ಹಂಚಿದ್ದಾರೆ.

ಶೆಟ್ಟರ್ ಅವರೇ, RSS ಅಸ್ತಿತ್ವಕ್ಕೆ ಬಂದಿದ್ದು ನೂರು ವರ್ಷಗಳ ಹಿಂದೆ. ಆದರೆ ಸಾವಿರಾರು ವರ್ಷಗಳಿಂದ ‘ಹಿಂದೂ’ ಎಂದು ಗುರುತಿಸಿಕೊಂಡಿರುವ ಧರ್ಮಾಚರಣೆ ಅಸ್ತಿತ್ವದಲ್ಲಿದೆ. ಈ ಸತ್ಯ ನಿಮಗೆ ತಿಳಿದಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ನಾಯಕರಿಗೆ ಆರ್ಎಸ್ಎಸ್ ಹೊಗಳುವುದು ಅನಿವಾರ್ಯವಾಗಿದೆ. ಆರ್ಎಸ್ಎಸ್ ಅವರಿಗಂತೂ ಬಸವಣ್ಣನವರ ತತ್ವದಲ್ಲಿ ನಂಬಿಕೆ ಇಲ್ಲ. ತಮಗೂ ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ನಿಜವಾಗಿಯೂ ಬಸವ ತತ್ವದಲ್ಲಿ ನಂಬಿಕೆ ಇರುವವರು ಆರ್ಎಸ್ಎಸ್ ಅನ್ನು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ. ಹಿಂದೆ, ಇಂದು, ಎಂದಿಗೂ ಈ ಭಾರತ ಜಾತ್ಯತೀತ ತತ್ವಗಳ ನೆಲವಾಗಿದೆ, ಮುಂದೆಯೂ ಜಾತ್ಯತೀತ ನೆಲವಾಗಿಯೇ ಇರಲಿದೆ ಎಂದು ತಿವಿದಿದ್ದಾರೆ.
.ಪ್ರಿಯಾಂಕ್ ಖರ್ಗೆ ಮಾದಕವಸ್ತು ಮಾರಾಟಗಾರರ ಕಿಂಗ್ಪಿನ್: ಆರೋಪ.ಸಿಎಂ ಬದಲಾವಣೆ ಹೈಕಮಾಂಡ್ ನಿರ್ಧಾರ: ಸಚಿವ ಪ್ರಿಯಾಂಕ್ ಖರ್ಗೆ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.