ಬೆಂಗಳೂರು: ಕರಾವಳಿಯಲ್ಲಿ ತಾಪಮಾನ ಹೆಚ್ಚಳವಾಗಿದ್ದು, ದಕ್ಷಿಣ ಕನ್ನಡದ ಸುಳ್ಯದಲ್ಲಿ ಗರಿಷ್ಠ ಉಷ್ಣಾಂಶ (41.4 ಡಿಗ್ರಿ ಸೆಲ್ಸಿಯಸ್) ಮಂಗಳವಾರ ದಾಖಲಾಗಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಪ್ರಕಾರ ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದ ತಲಾ 10 ಕಡೆ, ಉಡುಪಿಯ ಎರಡು ಕಡೆ ಹಾಗೂ ಕೊಡಗು ಜಿಲ್ಲೆಯ ಒಂದು ಕಡೆ ಗರಿಷ್ಠ ಉಷ್ಣಾಂಶವು 38 ಡಿಗ್ರಿ ಸೆಲ್ಸಿಯಸ್ನಿಂದ 41 ಡಿಗ್ರಿ ಸೆಲ್ಸಿಯಸ್ ವರೆಗೆ ವರದಿಯಾಗಿದೆ. ಉತ್ತರ ಒಳನಾಡಿನಲ್ಲಿ ಮುಂದಿನ ಎರಡು ದಿನಗಳು 2ರಿಂದ 3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಕೇಂದ್ರ ತಿಳಿಸಿದೆ.

ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಮೈಸೂರು, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಬುಧವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನ ಕೆಲವೆಡೆ ಮಂಗಳವಾರ ಸಂಜೆ ತುಂತುರು ಮಳೆ ಸುರಿದಿದೆ. ಇದು ಈ ವರ್ಷದ ಮೊದಲ ಮಳೆಯಾಗಿದೆ. ಬುಧವಾರ ಮಧ್ಯಾಹ್ನದ ಬಳಿಕ ಮೋಡ ಕವಿದ ವಾತಾವರಣ ಇರಲಿದೆ ಎಂದು ಇಲಾಖೆ ತಿಳಿಸಿದೆ.

ಮಂಗಳೂರು ವರದಿ: ದಕ್ಷಿಣ ಕನ್ನಡ ಜಿಲ್ಲೆಯ ಪಾಣೆಮಂಗಳೂರು (40.5 ಡಿಗ್ರಿ ಸೆಲ್ಸಿಯಸ್), ಕಡಬ (40.4), ಬೆಳ್ತಂಗಡಿ ಕೊಕ್ಕಡ (40.3), ಪುತ್ತೂರು (40.2), ಉಪ್ಪಿನಂಗಡಿ (40), ಮೂಡಬಿದಿರೆ (39), ಬಂಟ್ವಾಳ (38), ಉಡುಪಿ ಜಿಲ್ಲೆಯ ಹೆಬ್ರಿ (39.5), ಕಾರ್ಕಳ (38), ಕೊಡಗು ಜಿಲ್ಲೆಯ ಸಂಪಾಜೆ (40.7), ಉತ್ತರ ಕನ್ನಡ ಜಿಲ್ಲೆಯ ಕಾರವಾರ ಘಡಸಾಯಿ (41.1), ಹೊನ್ನಾವರ ಮಾವಿನಕುರ್ವೆ (39.2), ಮುಂಡಗೋಡ ಪಾಳ ಮತ್ತು ಕಾರವಾರ ಸಾವಂತವಾಡ (39.3), ಅಂಕೋಲಾ ಅವರ್ಸಾ (38.4) ಗರಿಷ್ಠ ಉಷ್ಣಾಂಶ ದಾಖಲಾದ ಹೋಬಳಿಗಳು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.