ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಪಮಾನ ಹೆಚ್ಚಳ | ಮಕ್ಕಳು, ವೃದ್ಧರ ರಕ್ಷಿಸಿ: ಆರೋಗ್ಯ ಇಲಾಖೆ ಮನವಿ

Published 13 ಏಪ್ರಿಲ್ 2024, 15:34 IST
Last Updated 13 ಏಪ್ರಿಲ್ 2024, 15:34 IST
ಅಕ್ಷರ ಗಾತ್ರ

ಬೆಂಗಳೂರು: ತಾಪಮಾನ ಹೆಚ್ಚಳದ ಕಾರಣ ಮಕ್ಕಳು, ವೃದ್ಧರು, ಗರ್ಭಿಣಿಯರು, ಹೃದಯ ಸೇರಿ ವಿವಿಧ ಅನಾರೋಗ್ಯ ಸಮಸ್ಯೆ ಇರುವವರ ರಕ್ಷಣೆಗೆ ಆದ್ಯತೆ ನೀಡಬೇಕು ಎಂದು ಆರೋಗ್ಯ ಇಲಾಖೆ ಮನವಿ ಮಾಡಿಕೊಂಡಿದೆ. 

ಬಿಸಿಗಾಳಿಯಿಂದ ದೇಹದಲ್ಲಿ ನೀರಿನ ಅಂಶ ಕಡಿಮೆಯಾಗಿ, ‘ಸನ್ ಸ್ಟ್ರೋಕ್’ (ಸೂರ್ಯಾಘಾತ) ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಆಗಾಗ ನೀರು ಕುಡಿಯಬೇಕು. ನಿಂಬೆ ಹಣ್ಣಿನ ಶರಬತ್ತು, ಮಜ್ಜಿಗೆ, ಲಸ್ಸಿ, ಹಣ್ಣಿನ ಜ್ಯೂಸ್ ಸೇರಿ ವಿವಿಧ ದ್ರವ ಪದಾರ್ಥಗಳನ್ನು ಹೆಚ್ಚಾಗಿ ಸೇವಿಸಬೇಕು. ತಾಜಾ ಹಣ್ಣುಗಳನ್ನು ತಿನ್ನುವುದೂ ಸೇರಿ ಸೇರಿ ವಿವಿಧ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು ಎಂದು ಇಲಾಖೆ ಹೇಳಿದೆ. 

‘ಸನ್ ಸ್ಟ್ರೋಕ್’ನಿಂದ ರಕ್ಷಣೆ ಹೇಗೆ?

। ಮಧ್ಯಾಹ್ನದ ಸಮಯದಲ್ಲಿ ಶ್ರಮದಾಯಕ ಕೆಲಸಗಳನ್ನು ಮಾಡಬೇಡಿ

। ಹೆಚ್ಚು ನೀರನ್ನು ಕುಡಿಯಿರಿ

। ತಿಳಿ ಬಣ್ಣದ ಸಡಿಲವಾದ ಬಟ್ಟೆಯನ್ನು ಧರಿಸಿ

। ಹೊರಾಂಗಣದಲ್ಲಿ ಕೆಲಸ ಮಾಡುವಾಗ ಆಗಾಗ ವಿಶ್ರಾಂತಿ ಪಡೆಯಿರಿ

। ಕೊಡೆ, ಟೋಪಿ, ಟವೆಲ್‌ಗಳನ್ನು ರಕ್ಷಣೆಗೆ ಬಳಸಿಕೊಳ್ಳಿ

। ತಣ್ಣನೆಯ ನೀರಿನಲ್ಲಿ ಸ್ನಾನ ಮಾಡಿ

ಪ್ರಥಮ ಚಿಕಿತ್ಸೆ ಹೇಗೆ?

। ವ್ಯಕ್ತಿಯನ್ನು ತಣ್ಣಗಿನ ಸ್ಥಳದಲ್ಲಿ ಮಲಗಿಸಿ, ದೇಹವನ್ನು ಒದ್ದೆ ಬಟ್ಟೆಯಿಂದ ಒರೆಸಬೇಕು

। ಕುಡಿಯಲು ಆಗಾಗ ನೀರನ್ನು ಕೊಡಬೇಕು

। ವ್ಯಕ್ತಿಯು ಚೇತರಿಸಿಕೊಂಡ ನಂತರ ನೀರಿನ ಅಂಶ ಹೆಚ್ಚಾಗಿರುವ ಪದಾರ್ಥಗಳನ್ನು ನೀಡಬೇಕು

ಏನು ಮಾಡಬಾರದು

। ಮಧ್ಯಾಹ್ನ 12 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಹೊರಗೆ ಹೋಗದಿರುವುದು ಉತ್ತಮ

। ಮದ್ಯಪಾನ, ಚಹ, ಕಾಫಿ ಹಾಗೂ ಕಾರ್ಬೊನೇಟೆಡ್ ಪಾನೀಯಗಳನ್ನು ಕುಡಿಯಬೇಡಿ. ಇದರಿಂದ ನಿರ್ಜಲೀಕರಣ ಉಂಟಾಗುತ್ತದೆ

। ನಿಲ್ಲಿಸಿದ ವಾಹನಗಳ ಒಳಗೆ ಮಕ್ಕಳನ್ನು ಬಿಡಬೇಡಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT