ಖಾಸಗಿ ಕಾಲೇಜು ಆಡಳಿತ ಮಂಡಳಿಗಳ ಪ್ರತಿನಿಧಿಗಳು ಶೇ 15ರಿಂದ ಶೇ 20ರವರೆಗೆ ಶುಲ್ಕ ಹೆಚ್ಚಳಕ್ಕೆ ಬೇಡಿಕೆ ಸಲ್ಲಿಸಿದ್ದವು. ಆದರೆ, ಶೇ 10ರಷ್ಟು ಹೆಚ್ಚಳಕ್ಕೆ ಅನುಮತಿ ನೀಡಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹಂಚಿಕೆ ಮಾಡುವ ಸರ್ಕಾರಿ ಕೋಟಾದ ಸೀಟುಗಳಿಗೆ ₹1.40 ಲಕ್ಷ ಹಾಗೂ ಖಾಸಗಿ ಕೋಟಾದ ಸೀಟುಗಳಿಗೆ ₹11.88 ಲಕ್ಷ ನಿಗದಿ ಮಾಡಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ ಹೇಳಿದ್ದಾರೆ.