ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆಯುವ ₹50 ಕೋಟಿ ಮತ್ತು ಅದಕ್ಕಿಂತ ಹೆಚ್ಚಿನ ವೆಚ್ಚದ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಕುರಿತು ಪರಿಶೀಲನೆ ನಡೆಸಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ರತ್ನಕಲಾ ನೇತೃತ್ವದಲ್ಲಿ ಮೂವರು ಸದಸ್ಯರ ಸಮಿತಿ ರಚಿಸಿ ಶನಿವಾರ ಆದೇಶ ಹೊರಡಿಸಲಾಗಿದೆ.

ಜಲ ಸಂಪನ್ಮೂಲ ಇಲಾಖೆ ನಿವೃತ್ತ ಕಾರ್ಯದರ್ಶಿ ಬಿ.ಜಿ. ಗುರುಪಾದಸ್ವಾಮಿ ಮತ್ತು ರಾಜ್ಯ ಲೆಕ್ಕಪತ್ರ ಇಲಾಖೆ ನಿವೃತ್ತ ನಿರ್ದೇಶಕ ಕೆ. ನಂದಕುಮಾರ್ ಅವರನ್ನು ಸಮಿತಿಯ ಸದಸ್ಯರನ್ನಾಗಿ ನೇಮಿಸಲಾಗಿದೆ.

ಈ ಸಮಿತಿಯು ₹50 ಕೋಟಿ ಮತ್ತು ಅದಕ್ಕಿಂತ ಹೆಚ್ಚಿನ ಮೊತ್ತದ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಕುರಿತು ಪರಿಶೀಲನೆ ನಡೆಸಿ ವರದಿಗಳನ್ನು ನೀಡಲಿದೆ.

ಸರ್ಕಾರದ ವಿವಿಧ ಇಲಾಖೆಗಳ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಯಲ್ಲಿ ವ್ಯಾಪಕ ಅಕ್ರಮ ನಡೆಯುತ್ತಿದೆ ಎಂದು ಗುತ್ತಿಗೆದಾರರ ಸಂಘದ ಸದಸ್ಯರು ಮತ್ತು ವಿರೋಧ ಪಕ್ಷಗಳ ನಾಯಕರು ಆರೋಪ ಮಾಡಿದ್ದರು. ಆ ಬಳಿಕ, ಟೆಂಡರ್ ಪರಿಶೀಲನೆಗೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.