ಶುಕ್ರವಾರ, 1 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ ಗಲಭೆ: ರಾತ್ರಿ ಪಾಲಿಕೆಯಿಂದ ಫ್ಲೆಕ್ಸ್ ತೆರವು ಕಾರ್ಯಾಚರಣೆ

Last Updated 15 ಆಗಸ್ಟ್ 2022, 20:25 IST
ಅಕ್ಷರ ಗಾತ್ರ

ಶಿವಮೊಗ್ಗ: ಫ್ಲೆಕ್ಸ್ ಅಳವಡಿಕೆ ವಿಚಾರದಲ್ಲಿ ಗಲಭೆ ನಡೆದ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ಮಹಾನಗರ ಪಾಲಿಕೆಯಿಂದ ಶಿವಮೊಗ್ಗ ನಗರದಲ್ಲಿ ಅನಧಿಕೃತ ಫ್ಲೆಕ್ಸ್‌ಗಳ ತೆರವು ಕಾರ್ಯಾಚರಣೆ ನಡೆಯಿತು.

ಸ್ವತಃ ಪಾಲಿಕೆ ಆಯುಕ್ತ ಮಾಯಣ್ಣಗೌಡ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ನೂರಾರು ಸಿಬ್ಬಂದಿ ಪಾಲ್ಗೊಂಡಿದ್ದರು.

ಇಲ್ಲಿಯವರೆಗೆ ಶೇ 80 ರಷ್ಟು ಫ್ಲೆಕ್ಸ್ ತೆರವುಗೊಳಿಸಿದ್ದೇವೆ. ಉಳಿದವು ತಾಂತ್ರಿಕ ಕಾರಣದಿಂದ ತೆಗೆಯಲು ಸಾಧ್ಯವಾಗಿಲ್ಲ. ಮಂಗಳವಾರ ರಾತ್ರಿ ವೇಳೆಗೆ ಕಾರ್ಯಾಚರಣೆ ಪೂರ್ತಿಯಾಗಲಿದೆ ಎಂದು ಮಾಯಣ್ಣಗೌಡ 'ಪ್ರಜಾವಾಣಿ'ಗೆ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT