ಬೆಂಗಳೂರು: ಹಾಲಿ ಕೆಲಸ ಮಾಡುತ್ತಿರುವ ಪ್ರಾಥಮಿಕ ಶಾಲಾ ಶಿಕ್ಷಕರಿಗೂ ಟಿಇಟಿ ಅರ್ಹತೆ ಕಡ್ಡಾಯಗೊಳಿಸಿರುವುದನ್ನು ವಿರೋಧಿಸಿ ಅಖಿಲ ಭಾರತ ಪ್ರಾಥಮಿಕ ಶಾಲಾ ಶಿಕ್ಷಕರ ಫೆಡರೇಷನ್ ನ.24ರಂದು ದೆಹಲಿಯ ಜಂತರ್ಮಂತರ್ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ.

‘ಸುಪ್ರೀಂಕೋರ್ಟ್ ತೀರ್ಪಿನಂತೆ ದೇಶದಲ್ಲಿನ 30 ಲಕ್ಷ ಶಿಕ್ಷಕರು ಎರಡು ವರ್ಷದಲ್ಲಿ ಕಡ್ಡಾಯವಾಗಿ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ತೇರ್ಗಡೆಯಾಗಬೇಕು. ಇಲ್ಲದಿದ್ದರೆ ಶಿಕ್ಷಕ ವೃತ್ತಿಯಲ್ಲಿ ಮುಂದುವರಿಯಲು ಸಾಧ್ಯವಾಗದು. ಈ ಸಮಸ್ಯೆ ಬಗೆಹರಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಲು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ ನುಗ್ಗಲಿ ಹೇಳಿದ್ದಾರೆ.

‘ಕರ್ನಾಟಕ ಸರ್ಕಾರ ಈಗಾಗಲೇ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದೆ. ಪೂರಕ ಮಾಹಿತಿ ಸಂಗ್ರಹಿಸುತ್ತಿದೆ. ಶಿಕ್ಷಕರ ಫೆಡರೇಷನ್ ಸಹ ಸುಪ್ರೀಂಕೋರ್ಟ್ನಲ್ಲಿ ಈಗಾಗಲೇ ಮೇಲ್ಮನವಿ ಸಲ್ಲಿಸಿದೆ. ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕು. ವಿಶೇಷ ಕಾಯ್ದೆ ರೂಪಿಸಬೇಕು. ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರಿಗೆ ಸೇವಾ ಭದ್ರತೆ ಒದಗಿಸಬೇಕು. ಸುಪ್ರೀಂಕೋರ್ಟ್ನ ಆದೇಶವನ್ನು ಪೂರ್ವಾನ್ವಯಗೊಳಿಸದಂತೆ ಸೂಚಿಸಬೇಕು’ ಎಂದು ಒತ್ತಾಯಿಸಲಾಗುತ್ತದೆ ಎಂದರು.

ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು (ಟಿಇಟಿ) ಸೇವಾನಿರತ ಶಿಕ್ಷಕರಿಗೂ ಕಡ್ಡಾಯಗೊಳಿಸಿ ಈಚೆಗೆ ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.