ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿಇಟಿ: ಮೇ 15ರವರೆಗೆ ಅರ್ಜಿ ಸಲ್ಲಿಕೆ

Published 15 ಏಪ್ರಿಲ್ 2024, 16:00 IST
Last Updated 15 ಏಪ್ರಿಲ್ 2024, 16:00 IST
ಅಕ್ಷರ ಗಾತ್ರ

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ‘ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ (ಟಿಇಟಿ)‘ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಮೇ 15 ಕೊನೆಯ ದಿನ.

ರಾಜ್ಯದಾದ್ಯಂತ ಏಕಕಾಲಕ್ಕೆ ಜೂನ್‌ 30ರಂದು ಟಿಇಟಿ ಪರೀಕ್ಷೆಗಳು ನಡೆಯಲಿವೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ಇಲಾಖೆಯ ವೆಬ್‌ಸೈಟ್‌ www.schooleducation.kar.nic.in ಸಂಪರ್ಕಿಸಬಹುದು.

ಕಳೆದ ಸೆಪ್ಟೆಂಬರ್‌ನಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಸಲಾಗಿತ್ತು. ಪತ್ರಿಕೆ–1ರಲ್ಲಿ ಪರೀಕ್ಷೆ ಬರೆದಿದ್ದ (1ರಿಂದ 5ನೇ ತರಗತಿಯ ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕರು) 1.27 ಲಕ್ಷ ಅಭ್ಯರ್ಥಿಗಳಲ್ಲಿ 14,922 ಹಾಗೂ ಪತ್ರಿಕೆ–2ರಲ್ಲಿ ಪರೀಕ್ಷೆ ಬರೆದಿದ್ದ (6ರಿಂದ 8ನೇ ತರಗತಿಯ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರು) 1.74 ಲಕ್ಷ ಅಭ್ಯರ್ಥಿಗಳಲ್ಲಿ 49,908 ಮಂದಿ ಅರ್ಹತೆ ಪಡೆದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT