ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಗ್ಲಿಷ್ ಮಾಧ್ಯಮ ಶಾಲೆಗಳಿಗೆ ದ್ವಿಭಾಷಾ ಪಠ್ಯಪುಸ್ತಕ

Published 21 ಡಿಸೆಂಬರ್ 2023, 15:37 IST
Last Updated 21 ಡಿಸೆಂಬರ್ 2023, 15:37 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರಿ ಕನ್ನಡ ಮತ್ತು ಉರ್ದು ಶಾಲೆಗಳಲ್ಲಿ ಆರಂಭಿಸಿರುವ ಇಂಗ್ಲಿಷ್‌ ಮಾಧ್ಯಮದ ವಿದ್ಯಾರ್ಥಿಗಳಿಗೆ 2024–25ನೇ ಸಾಲಿನಿಂದ ದ್ವಿಭಾಷೆಗಳಲ್ಲಿ ಪಠ್ಯಪುಸ್ತಕ ಪೂರೈಸಲು ಕರ್ನಾಟಕ ಪಠ್ಯಪುಸ್ತಕ ಸಂಘ ನಿರ್ಧರಿಸಿದೆ.

ಈ ಕುರಿತು ಆದೇಶ ಹೊರಡಿಸಿರುವ ಸಂಘದ ವ್ಯವಸ್ಥಾಪಕ ನಿರ್ದೇಶಕರು, ಇಂಗ್ಲಿಷ್‌ ಮಾಧ್ಯಮ ಶಾಲೆಗಳು 1ರಿಂದ 5ನೇ ತರಗತಿಯವರೆಗೆ ದ್ವಿಭಾಷಾ ಪುಸ್ತಕಗಳಿಗೆ ಬೇಡಿಕೆ ಸಲ್ಲಿಸಬೇಕು. 6ನೇ ತರಗತಿಯಿಂದ ದ್ವಿಭಾಷಾ ಪಠ್ಯಕ್ರಮ ಇರುವುದಿಲ್ಲ. ಹಾಗಾಗಿ, 6ನೇ ತರಗತಿಗೆ ಎನ್‌ಸಿಇಆರ್‌ಟಿಯ ಇಂಗ್ಲಿಷ್‌ ಅಥವಾ ಹಿಂದಿ ಪಠ್ಯಪುಸ್ತಕಗಳಿಗೆ ಬೇಡಿಕೆ ಸಲ್ಲಿಸಬೇಕು ಎಂದು ಸೂಚಿಸಿದ್ದಾರೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಶಿಫಾರಸಿನಂತೆ ರಾಜ್ಯದ ಇತರೆ ಭಾಷೆಗಳ ಶಾಲೆಗಳಲ್ಲೂ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿಸುವುದನ್ನು ಕೆಲ ವರ್ಷಗಳ ಹಿಂದೆಯೇ ಸರ್ಕಾರ ಕಡ್ಡಾಯ ಮಾಡಿತ್ತು. ಹಾಗಾಗಿ, ಮುಂದಿನ ಶೈಕ್ಷಣಿಕ ವರ್ಷದಿಂದ 8ನೇ ತರಗತಿಗೆ ಕನ್ನಡ ತೃತೀಯ ಭಾಷಾ ಪಠ್ಯಪುಸ್ತಕಗಳನ್ನು ಮುದ್ರಿಸುವುದಿಲ್ಲ ಎಂದು ಹೇಳಿದೆ.

ಎಲ್ಲ ಶಾಲೆಗಳು ಪಠ್ಯಪುಸ್ತಕದ ಬೇಡಿಕೆಯನ್ನು ಎಸ್‌ಎಟಿಎಸ್‌ ತಂತ್ರಾಂಶದಲ್ಲಿ ದಾಖಲಿಸಬೇಕು. ಅನುದಾನರಹಿತ ಖಾಸಗಿ ಶಾಲೆಗಳು ಪುಸ್ತಕಗಳ ಒಟ್ಟು ಮೌಲ್ಯದ ಶೇ 10ರಷ್ಟು ಹಣವನ್ನು ಮುಂಗಡವಾಗಿ ಪಾವತಿಸಬೇಕು. ಬೇಡಿಕೆ ಸಲ್ಲಿಸುವ, ಪರಿಶೀಲಿಸುವ, ಅಂತಿಮಗೊಳಿಸುವ ಪ್ರಕ್ರಿಯೆ ಜ.16ಕ್ಕೆ ಮುಕ್ತಾಯವಾಗಲಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT