ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಠ್ಯಪುಸ್ತಕ ಪರಿಷ್ಕರಣೆ ಖಚಿತ: ಮಧು ಬಂಗಾರಪ್ಪ

Published 4 ಜೂನ್ 2023, 1:10 IST
Last Updated 4 ಜೂನ್ 2023, 1:10 IST
ಅಕ್ಷರ ಗಾತ್ರ

ಶಿವಮೊಗ್ಗ: ‘ಪಠ್ಯಪುಸ್ತಕಗಳನ್ನು ಪರಿಷ್ಕರಿಸುವುದು ಖಚಿತ. ಅದರಲ್ಲಿ ಯಾವುದೇ ಗೊಂದಲವಿಲ್ಲ’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದರು.

‘ಪಠ್ಯ ಪರಿಷ್ಕರಣೆಗೆ ಸ್ವಲ್ಪ ಸಮಯ ಬೇಕು. ಹಂತ ಹಂತವಾಗಿ ಎಲ್ಲವನ್ನೂ ನಿರ್ವಹಿಸುತ್ತೇವೆ. ಯಾವ ಯಾವ ಭಾಗವನ್ನು ಪರಿಷ್ಕರಣೆಗೆ ಒಳ‍ಪಡಿಸಬೇಕು ಎಂಬುದರ ಬಗ್ಗೆ ಪರಿಶೀಲನೆ ನಡೆಯುತ್ತಿದೆ’ ಎಂದು ಸುದ್ದಿಗಾರರಿಗೆ ತಿಳಿಸಿದರು.

‘ನಾನು ಅಧಿಕಾರ ವಹಿಸಿಕೊಳ್ಳುವ ಹೊತ್ತಿಗೆ ಪಠ್ಯಪುಸ್ತಕ ಮುದ್ರಣ ಪೂರ್ಣಗೊಂಡು ಶಾಲೆಗಳಿಗೆ ಕಳುಹಿಸಲಾಗಿತ್ತು. ಮಕ್ಕಳ ಶಿಕ್ಷಣಕ್ಕೆ ಯಾವುದೇ ತೊಂದರೆ ಆಗದಂತೆ ಮುಂಜಾಗ್ರತೆ ವಹಿಸಿ ಪಠ್ಯ ಪರಿಷ್ಕರಣೆ ಮಾಡಬೇಕಿದೆ. ಈಗಾಗಲೇ ಪಠ್ಯಪುಸ್ತಕ ವಿತರಣೆಯಾಗಿದ್ದರೂ ಪರಿಷ್ಕರಣೆಗೆ ಅವಕಾಶವಿದೆ. ಅದನ್ನು ಕಾನೂನುಬದ್ಧವಾಗಿ ಮಾಡಲಾಗುವುದು’ ಎಂದು ಹೇಳಿದರು.

‘ಪರಿಷ್ಕರಣೆ ವಿಚಾರದಲ್ಲಿ ನನ್ನ ಸ್ವಾರ್ಥ ಏನೂ ಇಲ್ಲ. ಮಕ್ಕಳ ಹಿತ, ಭವಿಷ್ಯ ಗಮನದಲ್ಲಿಟ್ಟುಕೊಂಡು ಈ ಕಾರ್ಯಕ್ಕೆ ಕೈ ಹಾಕಿದ್ದೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT