ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಗೂಂಡಾ ಕಾಯ್ದೆಯಡಿ ಬಂಧಿತನಾಗಿದ್ದ ಆರೋಪಿ ಬಿಡುಗಡೆ

Published 12 ಡಿಸೆಂಬರ್ 2023, 16:23 IST
Last Updated 12 ಡಿಸೆಂಬರ್ 2023, 16:23 IST
ಅಕ್ಷರ ಗಾತ್ರ

ಬೆಂಗಳೂರು: ‘ಗೂಂಡಾ ಕಾಯ್ದೆಯಡಿ ಬಂಧಿತನಾಗಿದ್ದ ಆರೋಪಿಗೆ ಆತನಿಗೆ ತಿಳಿದಿರುವ ಭಾಷೆಯಲ್ಲಿ ಬಂಧನ ಆದೇಶದ ದಾಖಲೆಗಳನ್ನು ಒದಗಿಸಿಲ್ಲ‘ ಎಂಬ ಕಾರಣಕ್ಕೆ ಆತನನ್ನು ಬಿಡುಗಡೆ ಮಾಡುವಂತೆ ಹೈಕೋರ್ಟ್‌ ಆದೇಶಿಸಿದೆ.

ಈ ಸಂಬಂಧ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಬಂಧಿತ, ರೋಷನ್ ಜಮೀರ್ ಅವರ ತಂದೆ ಮೊಹಮ್ಮದ್ ಶಫೀವುಲ್ಲಾ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್‌ ಅರ್ಜಿಯನ್ನು ನ್ಯಾಯಮೂರ್ತಿ ಕೆ.ಸೋಮಶೇಖರ್ ಮತ್ತು ನ್ಯಾಯಮೂರ್ತಿ ಕೆ.ರಾಜೇಶ್ ರೈ ಅವರಿದ್ದ ವಿಭಾಗೀಯ ನ್ಯಾಯಪೀಠ ಮಾನ್ಯ ಮಾಡಿದೆ.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ‘ಆರೋಪಿಗೆ ಇಂಗ್ಲೀಷ್ ಮತ್ತು ಕನ್ನಡ ಭಾಷೆ ಗೊತ್ತಿದೆ. ಆತ ಕಳ್ಳತನ ಹಾಗೂ ಅಪರಾಧ ಕೃತ್ಯ ಎಸಗುವುದನ್ನೇ ವೃತ್ತಿಯನ್ನಾಗಿ ಮಾಡಿಕೊಂಡಿದ್ದು, 2013ರಿಂದಲೂ ಹಲವು ಅಪರಾಧ ಕೃತ್ಯಗಳನ್ನು ಎಸಗಿದ್ದಾನೆ. ಈತನ ವಿರುದ್ಧ 15 ‍ಪ್ರಕರಣಗಳು ವಿಚಾರಣೆಗೆ ಬಾಕಿ ಇವೆ. ಹಾಗಾಗಿ, ಸಾರ್ವಜನಿಕ ಹಿತದೃಷ್ಟಿಯಿಂದ ಗೂಂಡಾ ಕಾಯ್ದೆ ಅಡಿಯಲ್ಲಿ ಬಂಧಿಸಲಾಗಿದೆ‘ ಎಂದು ವಾದ ಮಂಡಿಸಿದ್ದರು.

ಈ ವಾದವನ್ನು ಅಲ್ಲಗಳೆದಿದ್ದ ಅರ್ಜಿದಾರರ ಪರ ವಕೀಲರು, ‘ಆರೋಪಿಯು ಅರೇಬಿಕ್ ಶಾಲೆಯಲ್ಲಿ ಎರಡನೇ ತರಗತಿವರೆಗೆ ಓದಿದ್ದು ಅರೇಬಿಕ್ ಮತ್ತು ಉರ್ದು ಕಲಿತಿದ್ದಾನೆ. ಇತರೆ ಭಾಷೆಗಳು ತಿಳಿದಿಲ್ಲ. ಅಂತೆಯೇ, ಆತ ಓದಿರುವುದು ಕೇವಲ 3 ವರ್ಷ ಮಾತ್ರ. ಸಂವಿಧಾನದ 22(5)ನೇ ವಿಧಿಯ ಪ್ರಕಾರ ಅಧಿಕಾರಿಗಳು ಯಾವುದೇ ಬಂಧಿತ ಆರೋಪಿಗೆ ಆತನಿಗೆ ತಿಳಿದಿರುವ ಭಾಷೆಯಲ್ಲಿ ಬಂಧನದ ಆದೇಶದ ದಾಖಲೆಗಳನ್ನು ಒದಗಿಸಬೇಕು. ಆದರೆ, ಈ ಪ್ರಕರಣದಲ್ಲಿ ಅವರು ವಿಫಲವಾಗಿದ್ದಾರೆ’ ಎಂದು ಪ್ರತಿವಾದ ಮಂಡಿಸಿದ್ದರು. 

ಅರ್ಜಿದಾರರ ಪರ ವಕೀಲರ ವಾದ ಮಾನ್ಯ ಮಾಡಿರುವ ನ್ಯಾಯಪೀಠ ಬಂಧಿತನ ಬಿಡುಗಡೆಗೆ ಆದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT