ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನಗಾರಿ ಬಾರಿಸುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಿದ ಬಿಜೆಪಿ-ಜೆಡಿಎಸ್ ನಾಯಕರು

Published : 3 ಆಗಸ್ಟ್ 2024, 8:11 IST
Last Updated : 3 ಆಗಸ್ಟ್ 2024, 8:11 IST
ಫಾಲೋ ಮಾಡಿ
Comments

ಕೆಂಗೇರಿ: 'ಮುಡಾ' ಪ್ರಕರಣದಲ್ಲಿ ಮುಖ್ಯಮಂತ್ರಿ ರಾಜೀನಾಮೆಗೆ ಅಗ್ರಹಿಸಿ ಬೆಂಗಳೂರಿನಿಂದ ಮೈಸೂರಿಗೆ ಹಮ್ಮಿಕೊಂಡಿರುವ ಪಾದಯಾತ್ರೆಗೆ ಬಿಜೆಪಿ-ಜೆಡಿಎಸ್ ನಾಯಕರು ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿದರು.

ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ. ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ, ಪ್ರಹಲಾದ್ ಜೋಶಿ, ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್ ಅಗಾರವಾಲ್, ಸಹ ಉಸ್ತುವಾರಿ ಸುಧಾಕರ್ ರೆಡ್ಡಿ ಅವರು ರಾಜ್ಯ ಸರ್ಕಾರದ ಹಗರಣಗಳ ವಿರುದ್ದ ವಾಗ್ದಾಳಿ ನಡೆಸಿ, ಮುಖ್ಯಮಂತ್ರಿ ರಾಜೀನಾಮೆಗೆ ಒತ್ತಾಯಿಸಿದರು.

ಈ ವೇಳೆ ಮಾತನಾಡಿರದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯ ಸರ್ಕಾರದ ಹಗರಣಗಳ ವಿರುದ್ಧ ಹೋರಾಟ ಮುಂದುವರಿಸುತ್ತೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೆ ಪ್ರತಿಭಟನೆ ಕೈಬಿಡುವುದಿಲ್ಲ ಎಂದರು.

ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಮಾತನಾಡಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ನಮ್ಮ ಕುಟುಂಬದ ಆಸ್ತಿ ಬಗ್ಗೆ ಪ್ರಶ್ನಿಸಿದ್ದಾರೆ. ಅದಕ್ಕೆಲ್ಲ ರಾಮನಗರದಲ್ಲಿ ಉತ್ತರ ಕೊಡುತ್ತೇನೆ. ಚರ್ಚೆಗೆ ಬರಲಿ. ಅವರ 1400 ಕೋಟಿ ಅಸ್ತಿಯ ಲೆಕ್ಕವನ್ನು ಕೊಡಲಿ ಎಂದು ತಿರುಗೇಟು ನೀಡಿದರು.

ಕೆಂಗೇರಿಯಿಂದ ಆರಂಭವಾದ ಪಾದಯಾತ್ರೆ ಮೊದಲ ದಿನ ಬಿಡದಿ ತಲುಪಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT