ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋರ್ಟ್‌ ಕಲಾಪ ಪ್ರಸಾರ: ಸರ್ಕಾರಕ್ಕೆ ನಿಯಮ ಸಲ್ಲಿಕೆ

Last Updated 9 ನವೆಂಬರ್ 2021, 19:31 IST
ಅಕ್ಷರ ಗಾತ್ರ

ಬೆಂಗಳೂರು: ‘ಕೋರ್ಟ್‌ ಕಲಾಪಗಳ ನೇರ ಪ್ರಸಾರಕ್ಕೆ (ಲೈವ್ ಸ್ಟ್ರೀಮಿಂಗ್) ಸಂಬಂಧಿಸಿದ ನಿಯಮಗಳನ್ನು ರೂಪಿಸಿ ಸರ್ಕಾರಕ್ಕೆ ಕಳಿಸಿಕೊಡಲಾಗಿದೆ’ ಎಂದು ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಮಾಹಿತಿ ನೀಡಲಾಗಿದೆ.

ಈ ಕುರಿತಂತೆ ವಕೀಲ ದಿಲ್‌ರಾಜ್ ರೋಹಿತ್ ಸಿಕ್ವೇರಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆರಿಜಿಸ್ಟ್ರಾರ್ ಜನರಲ್ ಪರ ವಕೀಲರು, ‘2021ರ ಸೆ.17ರಂದು ನಡೆದ ಹೈಕೋರ್ಟ್‌ ನ್ಯಾಯಮೂರ್ತಿಗಳ ಆಡಳಿತಾತ್ಮಕ ಪೂರ್ಣ ಸಭೆಯಲ್ಲಿ (ಫುಲ್ ಕೋರ್ಟ್) ಕೋರ್ಟ್‌ ಕಲಾಪ ನೇರ ಪ್ರಸಾರ ಮಾಡುವ ತೀರ್ಮಾನ ಕೈಗೊಳ್ಳಲಾಗಿದೆ. ಅದರನ್ವಯ ನಿಯಮಗಳನ್ನು ರೂಪಿಸಿ ಅನುಮೋದನೆಗಾಗಿ ಸರ್ಕಾರಕ್ಕೆ ಕಳುಹಿಸಿಕೊಡಲಾಗಿದೆ’ ಎಂದು ತಿಳಿಸಿದರು. ಇದನ್ನು ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆ ಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT