ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತ ಹಾಕಲು ಧಾರವಾಡಕ್ಕೆ ಪ್ರವೇಶ: ವಿನಯ್ ಕುಲಕರ್ಣಿ ಅರ್ಜಿ ತಿರಸ್ಕರಿಸಿದ ಕೋರ್ಟ್

ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಶಾಸಕ ವಿನಯ್ ಕುಲಕರ್ಣಿ ಅವರ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.
Published 6 ಮೇ 2024, 16:14 IST
Last Updated 6 ಮೇ 2024, 16:14 IST
ಅಕ್ಷರ ಗಾತ್ರ

ಬೆಂಗಳೂರು: ಮತ ಚಲಾಯಿಸುವ ಹಿನ್ನೆಲೆಯಲ್ಲಿ ಧಾರವಾಡ ಪ್ರವೇಶಿಸಲು ಅನುಮತಿ ನೀಡುವಂತೆ ಕೋರಿದ್ದ ಕೊಲೆ ಪ್ರಕರಣದ ಆರೋಪಿಯಾದ ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಶಾಸಕ ವಿನಯ್ ಕುಲಕರ್ಣಿ ಅವರ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.

ಈ ಕುರಿತಂತೆ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ (ಸಿಸಿಎಚ್‌–82) ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಸೋಮವಾರ ತಿರಸ್ಕರಿಸಿ ಆದೇಶಿಸಿದರು.

"ಅರ್ಜಿದಾರರು ಧಾರವಾಡ ಜಿಲ್ಲೆ ಪ್ರವೇಶಿಸದಂತೆ ಸುಪ್ರೀಂ ಕೋರ್ಟ್ ನಿರ್ಬಂಧ ವಿಧಿಸಿದ್ದು, ಈಗಾಗಲೇ ಹಲವು ಬಾರಿ ವಿವಿಧ ಕಾರಣಗಳಿಗಾಗಿ ಅವರು ಧಾರವಾಡ ಪ್ರವೇಶ ಕೋರಿ ಅರ್ಜಿ ಸಲ್ಲಿಸಿದ್ದರು. ಇಂತಹ ಅರ್ಜಿಗಳೆಲ್ಲಾ ತಿರಸ್ಕೃತಗೊಂಡಿವೆ. ಹಾಗಾಗಿ, ಈ ಅರ್ಜಿಯನ್ನೂ ಮಾನ್ಯ ಮಾಡಬಾರದು" ಎಂಬ ಪ್ರಾಸಿಕ್ಯೂಷನ್ ವಾದವನ್ನು ಮನ್ನಿಸಿದ ನ್ಯಾಯಾಧೀಶರು ಅರ್ಜಿ ತಿರಸ್ಕರಿಸಿದರು.

ಶಾಸಕ ವಿನಯ್ ಕುಲಕರ್ಣಿ, ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್‌ಗೌಡ ಗೌಡರ್ ಕೊಲೆ ಪ್ರಕರಣದ ಆರೋಪ ಎದುರಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT