ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಹಗರಣ | ವಿಜಯೇಂದ್ರ ಮಂಪರು ಪರೀಕ್ಷೆಗೆ ಹರಿಪ್ರಸಾದ್‌ ಆಗ್ರಹ

Published 13 ಜನವರಿ 2024, 14:42 IST
Last Updated 13 ಜನವರಿ 2024, 14:42 IST
ಅಕ್ಷರ ಗಾತ್ರ

ನವದೆಹಲಿ: ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್‌ ಹೆಸರಿನಲ್ಲಿ ₹40 ಸಾವಿರ ಕೋಟಿ ಹಗರಣ ನಡೆದಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆ ನೀಡಿದ್ದಾರೆ. ಇದರ ಬಗ್ಗೆ ತನಿಖೆ ಆಗಬೇಕು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಮಂಪರು ಪರೀಕ್ಷೆ ನಡೆಸಬೇಕು’ ಎಂದು ವಿಧಾನ ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ಆಗ್ರಹಿಸಿದರು. 

ಶನಿವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ರಾಮ ಮಂದಿರ ಉದ್ಘಾಟನೆ ವೇಳೆ ಗೋಧ್ರಾ ಮಾದರಿ ಘಟನೆ ನಡೆಯಬಹುದು ಎಂದು ನಾನು ಈ ಹಿಂದೆ ಹೇಳಿಕೆ ನೀಡಿದ್ದೆ. ನನ್ನ ಮಂಪರು ಪರೀಕ್ಷೆ ನಡೆಸಬೇಕು ಎಂದು ವಿಜಯೇಂದ್ರ ಹೇಳಿದ್ದಾರೆ. ಮಂಪರು ಪರೀಕ್ಷೆಗೆ ಒಳಪಡಲು ನಾನು ಸಿದ್ಧನಿದ್ದೇನೆ. ಅದೇ ರೀತಿ, ವಿಜಯೇಂದ್ರ ಅವರನ್ನೂ ಪರೀಕ್ಷೆಗೆ ಒಳಪಡಿಸಲಿ. ಲೈವ್‌ ಮೂಲಕವೇ ಇಬ್ಬರ ಪರೀಕ್ಷೆ ನಡೆಸಲಿ’ ಎಂದರು. 

‘ನನ್ನನ್ನು ಬಂಧಿಸಬೇಕು ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ ಒತ್ತಾಯಿಸಿದ್ದಾರೆ. ಅದಕ್ಕೆ ಮೊದಲು ಜಾಲಹಳ್ಳಿ ಠಾಣೆಯಲ್ಲಿ ಇರುವ ಪ್ರಕರಣಗಳು ಕುರಿತು ಅಶೋಕ ಯೋಚಿಸಲಿ. ಬಿಜೆಪಿಯವರ ಇತಿಹಾಸ ಏನೆಂಬುದು ನನಗೆ ಗೊತ್ತಿದೆ’ ಎಂದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT