ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಜೀವನ ನಿರ್ವಹಣೆಗಾಗಿ ಆಟೊ ಓಡಿಸುತ್ತಿದ್ದ ವೈದ್ಯರನ್ನು ಕೆಲಸಕ್ಕೆ ನಿಯೋಜಿಸಲಾಗಿದೆ’

Last Updated 10 ಸೆಪ್ಟೆಂಬರ್ 2020, 10:58 IST
ಅಕ್ಷರ ಗಾತ್ರ

ದಾವಣಗೆರೆ: ಜಿಲ್ಲೆಯ ವೈದ್ಯರೊಬ್ಬರುಮೇಲಧಿಕಾರಿಗಳ ಕಿರುಕುಳದಿಂದ ಬೇಸತ್ತು ನಗರದಲ್ಲಿ ಆಟೊ ಚಾಲನೆ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದಂತೆ ಸರ್ಕಾರ ಎಚ್ಚೆತ್ತುಕೊಂಡಿದೆ. ಈ ಸುದ್ದಿ ತಮ್ಮ ಗಮನಕ್ಕೆ ಬಂದ ಕೂಡಲೇ ಅವರನ್ನುಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ನಿಯೋಜಿಸಲಾಗಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಮಾಹಿತಿ ನೀಡಿರುವ ಶ್ರೀರಾಮುಲು ಅವರು, ‘ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಎಂ.ಎಚ್. ರವೀಂದ್ರನಾಥ್ ಅವರು ದಾವಣಗೆರೆಯಲ್ಲಿ ಬದುಕು ನಿರ್ವಹಣೆಗಾಗಿ ಆಟೋ ಓಡಿಸುತ್ತಿದ್ದಾರೆ ಎಂಬ ಮಾಧ್ಯಮ ವರದಿಗಳು ಗಮನಕ್ಕೆ ಬಂದಕೂಡಲೇ ಈ ಬಗ್ಗೆ ಹಿರಿಯ ಅಧಿಕಾರಿಗಳಿಂದ ವರದಿ ಕೇಳಿದ್ದೆ.ಅಂತೆಯೇ ವರದಿ ಪರಿಶೀಲನೆ ಬಳಿಕ ರವೀಂದ್ರನಾಥ್ ಅವರನ್ನು ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ನಿಯೋಜಿಸಲಾಗಿದೆ. ಹಗಲಿರುಳು ಶ್ರಮಿಸುವ ಎಲ್ಲಾ ವೈದ್ಯರ ಹಿತಾಸಕ್ತಿ ಕಾಪಾಡಲು ನಮ್ಮ ಸರ್ಕಾರ ಬದ್ಧ’ ಎಂದು ತಿಳಿಸಿದ್ದಾರೆ.

ಕುಂದವಾಡ ಸಮೀಪ ಮಹಾಲಕ್ಷ್ಮಿ ಲೇಔಟ್‌ನ ಡಾ.ಎಂ.ಎಚ್. ರವೀಂದ್ರನಾಥ್ ಅವರು ‘ಐಎಎಸ್ ಅಧಿಕಾರಿಗಳ ದುರಾಡಳಿತದಿಂದ ನೋಂದ ಜೀವ’ ಎಂದು ಆಟೊದ ಮೇಲೆ ಬರೆಸಿಕೊಂಡು ಆಟೊ ಚಾಲನೆ ಮಾಡಿ ಗಮನ ಸೆಳೆದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT