ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಹೋದರಿಗೆ ಅನುಕಂಪದ ಉದ್ಯೋಗಕ್ಕೆ ಅವಕಾಶವಿಲ್ಲ: ಹೈಕೋರ್ಟ್

Published 13 ಸೆಪ್ಟೆಂಬರ್ 2023, 23:30 IST
Last Updated 13 ಸೆಪ್ಟೆಂಬರ್ 2023, 23:30 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರಿ ನೌಕರ ಮೃತಪಟ್ಟಲ್ಲಿ ಅವರ ಸಹೋದರಿಯರಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ಕಲ್ಪಿಸಲು ಅವಕಾಶವಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.

ಬೆಸ್ಕಾಂನಲ್ಲಿ ಲೈನ್‌ಮ್ಯಾನ್ ಆಗಿ ಸೇವೆ ಸಲ್ಲಿಸುತ್ತಿದ್ದ ವಿವಾಹಿತ ಸಹೋದರ ಮೃತಪಟ್ಟಿದ್ದು, ಅನುಕಂಪದ ಆಧಾರದಲ್ಲಿ ತನಗೆ ಉದ್ಯೋಗ ಒದಗಿಸಲು ಕೆಪಿಟಿಸಿಲ್‌ ಮತ್ತು ಬೆಸ್ಕಾಂಗೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ತಕರಾರು ಅರ್ಜಿಯನ್ನು ಹೈಕೋರ್ಟ್‌ ಏಕ ಸದಸ್ಯ ಪೀಠ ವಜಾಗೊಳಿಸಿತ್ತು. ಈ ಆದೇಶ ಪ್ರಶ್ನಿಸಿ ತುಮಕೂರು ಜಿಲ್ಲೆ ಗೆದ್ಲಹಳ್ಳಿ ನಿವಾಸಿ ಜಿ.ಎಂ. ಪಲ್ಲವಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

ಮೇಲ್ಮನವಿಯನ್ನು ವಜಾಗೊಳಿಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್‌ ಅವರಿದ್ದ ವಿಭಾಗೀಯ ನ್ಯಾಯಪೀಠ, ಮೃತ ನೌಕರ (ಸಹೋದರ) ಮೃತಪಟ್ಟ ವೇಳೆ ಅವರ ಆದಾಯದ ಮೇಲೆ ತಾನು ಅಲವಂಬಿಸಿದ್ದೆ ಎಂಬುದನ್ನು ದೃಢಪಡಿಸುವ ಸಾಕ್ಷ್ಯವನ್ನು ಮೇಲ್ಮನವಿದಾರರು ಸಲ್ಲಿಸಿಲ್ಲ. ಅನುಕಂಪದ ಉದ್ಯೋಗವನ್ನು ಸಮರ್ಥಿಸಿಕೊಳ್ಳವುದಕ್ಕಾಗಿ ಮೃತ ನೌಕರನ ಕುಟುಂಬವು ಆರ್ಥಿಕ ಮುಗ್ಗಟ್ಟಿಗೆ ತುತ್ತಾಗಿದೆ ಎಂಬುದನ್ನು ಸಾಬೀತುಪಡಿಸಲು ದಾಖಲೆಗಳು ಇಲ್ಲವಾಗಿದೆ. ಆದ್ದರಿಂದ ಮೇಲ್ಮನವಿದಾರರನ್ನು ಅನುಕಂಪದ ಆಧಾರದಲ್ಲಿ ಉದ್ಯೋಗಕ್ಕೆ ಪರಿಗಣಿಸಲು ನಿರಾಕರಿಸಿದ ಏಕ ಸದಸ್ಯ ನ್ಯಾಯಪೀಠದ ಆದೇಶದಲ್ಲಿ ಸೂಕ್ತವಾಗಿದ್ದು, ಅದರಲ್ಲಿ ಮಧ್ಯಪ್ರವೇಶಿಸುವ ಅಗತ್ಯವಿಲ್ಲ ಎಂದು ತಿಳಿಸಿದೆ.

ಮೃತ ನೌಕರನ ಕುಟುಂಬ ಸದಸ್ಯರು ಮಾತ್ರ ಅನುಕಂಪದ ಆಧಾರದ ಮೇಲೆ ಉದ್ಯೋಗ ನೇಮಕಾತಿ ಕ್ಲೇಮು ಮಾಡಬೇಕಿದೆ ಎಂದು ಕಾನೂನು ಹೇಳುತ್ತದೆ. ಅದು ಸಹ ಸಾವನ್ನಪ್ಪಿದ ಸರ್ಕಾರಿ ನೌಕರನ ಮೇಲೆ ಅವಲಂಬಿತರಾಗಿದ್ದೆವು ಎಂಬುದನ್ನು ದೃಢಪಡಿಸುವ ಸಾಕ್ಷ್ಯಾಧಾರಗಳ ಮೇಲೆ ಅನುಕಂಪದ ಉದ್ಯೋಗವನ್ನು ಕ್ಲೇಮು ಮಾಡಬಹುದಾಗಿದೆ ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT