ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷ್ಣಾರೆಡ್ಡಿ ವಿರುದ್ಧದ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಹೈಕೋರ್ಟ್‌ ತಡೆ

Published 22 ಏಪ್ರಿಲ್ 2024, 15:45 IST
Last Updated 22 ಏಪ್ರಿಲ್ 2024, 15:45 IST
ಅಕ್ಷರ ಗಾತ್ರ

ಬೆಂಗಳೂರು: ಚಿಂತಾಮಣಿ ಕ್ಷೇತ್ರದ ಮಾಜಿ ಶಾಸಕ ಜೆಡಿಎಸ್‌ನ ಎಂ.ಕೃಷ್ಣಾರೆಡ್ಡಿ ವಿರುದ್ಧದ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಹೈಕೋರ್ಟ್‌ ತಡೆ ನೀಡಿದೆ.

ಈ ಸಂಬಂಧ ನಗರದ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಹೊರಡಿಸಿದ್ದ ಆದೇಶ ರದ್ದು ಕೋರಿ ಕೃಷ್ಣಾರೆಡ್ಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

‘ಬನಶಂಕರಿಯ 2ನೇ ಹಂತದ ಭವಾನಿ ಹೌಸಿಂಗ್‌ ಕೋ ಆಪರೇಟಿವ್‌ ಸಂಸ್ಥೆ ಮತ್ತು ಇತರೆ 41 ಜನರು, ಕತ್ರಿಗುಪ್ಪೆಯ ಸರ್ವೇ ನಂ.125 ಹಾಗೂ 126ಕ್ಕೆ ಸೇರಿದ 3 ಎಕರೆ 29 ಗುಂಟೆ ಸರ್ಕಾರದ ಜಾಗವನ್ನು ಕಬಳಿಸಿದ್ದಾರೆ. ಇದರ ಮೌಲ್ಯ ಅಂದಾಜು ₹350 ಕೋಟಿಯಷ್ಟಿದೆ’ ಎಂದು ಆರೋಪಿಸಿ ಬಿಜೆಪಿ ಮುಖಂಡ ಎನ್‌.ಆರ್‌.ರಮೇಶ್‌ ಮ್ಯಾಜಿಸ್ಟ್ರೇಟ್‌ ಕೋರ್ಟ್‌ನಲ್ಲಿ 2022ರಲ್ಲಿ ಖಾಸಗಿ ದೂರು ಸಲ್ಲಿಸಿದ್ದರು.

ಈ ಸಂಬಂಧದ ಆರೋಪ ಪ್ರತ್ಯಾರೋಪಗಳು ಮುಂದುವರೆದಿತ್ತು. ಅಂತೆಯೇ, ದೂರು ಆಧರಿಸಿ ಕೃಷ್ಣಾರೆಡ್ಡಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಆದೇಶಿಸಿತ್ತು. ಇದನ್ನು ರದ್ದುಪಡಿಸುವಂತೆ ಕೋರಿ ಕೃಷ್ಣಾರೆಡ್ಡಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT