ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶತಕೋಟಿ ತಲುಪಿದ ‘ಶಕ್ತಿ’ ಪ್ರಯಾಣಿಕರ ಸಂಖ್ಯೆ

ರಾಜ್ಯ ಸರ್ಕಾರದ ಮಹತ್ವದ ಯೋಜನೆ
Published 23 ನವೆಂಬರ್ 2023, 15:47 IST
Last Updated 23 ನವೆಂಬರ್ 2023, 15:47 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾದ ‘ಶಕ್ತಿ’ಯನ್ನು ಬಳಸಿಕೊಂಡು ಉಚಿತವಾಗಿ ಪ್ರಯಾಣಿಸಿದ ಮಹಿಳೆಯರ ಸಂಖ್ಯೆ 100 ಕೋಟಿ ದಾಟಿದೆ.

ಯೋಜನೆ ಜಾರಿಯಾದ ದಿನವಾದ ಜೂನ್‌ 11ರಿಂದ ನ.22ರ ವರೆಗೆ 165 ದಿನಗಳಲ್ಲಿ ನಾಲ್ಕು ನಿಗಮಗಳ ಸಾರಿಗೆ ಬಸ್‌ಗಳಲ್ಲಿ 178.67 ಕೋಟಿ ಜನರು ಪ್ರಯಾಣಿಸಿದ್ದಾರೆ. ಅದರಲ್ಲಿ 100.47 ಕೋಟಿ ಜನರು ಮಹಿಳೆಯರಾಗಿದ್ದಾರೆ. ಅವರ ಪ್ರಯಾಣದ ಟಿಕೆಟ್‌ ಮೌಲ್ಯ ₹ 2,397 ಕೋಟಿ ದಾಟಿದೆ.

ಈ ಮೈಲಿಗಲ್ಲಿನ ಸಂಭ್ರಮ ಮತ್ತು ಸಾರಿಗೆ ಸಂಸ್ಥೆಗಳ ಅಪಘಾತ ರಹಿತ ಚಾಲಕರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಪ್ರದಾನ ಸಮಾರಂಭವನ್ನು ಸಾರಿಗೆ ಇಲಾಖೆಯು ನ.24ರಂದು ಮಧ್ಯಾಹ್ನ 12ಕ್ಕೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಹಮ್ಮಿಕೊಂಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾರಂಭ ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ  ಭಾಗವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT