ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಮತ್ತೆ ಎನ್‌ಐಎ ಕಸ್ಟಡಿಗೆ ಶಂಕಿತರು

Published 6 ಮೇ 2024, 15:39 IST
Last Updated 6 ಮೇ 2024, 15:39 IST
ಅಕ್ಷರ ಗಾತ್ರ

ಬೆಂಗಳೂರು: ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಗಳಾದ ಅಬ್ದುಲ್ ಮಥೀನ್ ಅಹಮ್ಮದ್ ತಾಹಾ ಹಾಗೂ ಮುಸಾವೀರ್ ಹುಸೇನ್ ಶಾಜೀಬ್‌ನನ್ನು ಎನ್‌ಐಎ (ರಾಷ್ಟ್ರೀಯ ತನಿಖಾ ದಳ) ಅಧಿಕಾರಿಗಳು ಪುನಃ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

ಮಾರ್ಚ್ 1ರಂದು ನಡೆದಿದ್ದ ಬಾಂಬ್ ಸ್ಫೋಟ ಪ್ರಕರಣದಲ್ಲಿ ಇಬ್ಬರನ್ನೂ ಏಪ್ರಿಲ್ 12ರಂದು ಬಂಧಿಸಲಾಗಿತ್ತು. ಬಳಿಕ, ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ಪ್ರಕರಣದ ಬಗ್ಗೆ ನಿರಂತರವಾಗಿ ತನಿಖೆ ನಡೆಸುತ್ತಿರುವ ಎನ್‌ಐಎ ಅಧಿಕಾರಿಗಳು, ಮತ್ತಷ್ಟು ಮಹತ್ವದ ಮಾಹಿತಿ ಕಲೆಹಾಕಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುವ ಉದ್ದೇಶದಿಂದ ನ್ಯಾಯಾಲಯದ ಅನುಮತಿ ಪಡೆದು, ಮುಸಾವೀರ್ ಹಾಗೂ ತಾಹಾನನ್ನು ಕಸ್ಟಡಿಗೆ ಪಡೆದುಕೊಂಡಿದ್ದಾರೆ.

‘ಬಾಂಬ್ ಸ್ಫೋಟದ ಆರೋಪಿಗಳು, ಹಲವು ದಿನಗಳಿಂದ ಸಂಚು ರೂಪಿಸಿದ್ದರು. ಇದಕ್ಕೆ ಹಲವರು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಾಯ ಮಾಡಿದ್ದರು. ಇದೀಗ, ಎಲ್ಲರನ್ನೂ ಪತ್ತೆ ಮಾಡಬೇಕಿದೆ. ಪ್ರಕರಣದ ತನಿಖೆಯ ಪ್ರಗತಿಯನ್ನು ನ್ಯಾಯಾಲಯಕ್ಕೆ ತಿಳಿಸಿ, ಇಬ್ಬರನ್ನೂ ಕಸ್ಟಡಿಗೆ ನೀಡುವಂತೆ ಕೋರಲಾಗಿತ್ತು. ಮನವಿ ಪುರಸ್ಕರಿಸಿದ ನ್ಯಾಯಾಲಯ, ಇಬ್ಬರನ್ನೂ ಮೇ 4ರಿಂದ ಮೇ 12ರವರೆಗೆ ಕಸ್ಟಡಿಗೆ ಒಪ್ಪಿಸಿದೆ’ ಎಂದು ಎಸ್‌ಐಟಿ ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT