ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿಗರನ್ನು ವಾಪಸ್‌ ಕಳುಹಿಸುತ್ತೇವೆ: ಡಿಸಿಎಂ

Last Updated 7 ಆಗಸ್ಟ್ 2018, 11:19 IST
ಅಕ್ಷರ ಗಾತ್ರ

ಬೆಂಗಳೂರು:ಅಕ್ರಮವಾಗಿ ನೆಲೆಸಿರುವ ವಿದೇಶಿಗರನ್ನು ಪತ್ತೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿಗರನ್ನು ವಾಪಸ್‌ ಕಳುಹಿಸಲಾಗುವುದು ಎಂದು ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಹೇಳಿದರು.

ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ವೀಸಾ ಅವಧಿ ಮುಗಿದ ಬಳಿಕವೂ ಇಲ್ಲಿಯೇ ನೆಲೆಸಿರುವ 100ಕ್ಕೂ ಹೆಚ್ಚು ಆಫ್ರಿಕಾದ ಪ್ರಜೆಗಳನ್ನು ಈಗಾಗಲೇ ಪತ್ತೆಮಾಡಲಾಗಿದೆ ಎಂದು ತಿಳಿಸಿದರು.

ಸೂಕ್ತ ದಾಖಲೆಗಳಲ್ಲದೆ, ವೀಸಾ ಅವಧಿ ಮುಗಿದ ಬಳಿಕ ಯಾವೊಬ್ಬ ವಿದೇಶಿಯರೂ ಬೆಂಗಳೂರಿನಲ್ಲಿ ನೆಲೆಸಲು ಬಿಡುವುದಿಲ್ಲ ಎಂದು ಪರಮೇಶ್ವರ್‌ ಹೇಳಿದರು ಎಂದು ಎಎನ್‌ಐ ವರದಿ ಮಾಡಿದೆ.

ರಾಜ್ಯದಲ್ಲಿದ್ದಾರೆ 1,076 ಅಕ್ರಮ ವಿದೇಶಿಗರು!
ರಾಜ್ಯದಲ್ಲಿ 1,076 ವಿದೇಶಿಗರು ಅಕ್ರಮವಾಗಿ ನೆಲೆಸಿದ್ದು, ಆ ಪೈಕಿ 117 ಮಂದಿಯನ್ನು ಮಾತ್ರ ಪೊಲೀಸರು ಪತ್ತೆ ಹಚ್ಚಿದ್ದಾರೆ.

ವಿದೇಶಿಗರ ಪ್ರಾದೇಶಿಕ ನೋಂದಣಿ ಕೇಂದ್ರದಲ್ಲಿ ಇದುವರೆಗೂ 28,000 ವಿದೇಶಿಗರ ನೋಂದಣಿ ಮಾಡಿಕೊಳ್ಳಲಾಗಿದೆ. ವೀಸಾ ಅವಧಿ ಮುಗಿದ ಬಳಿಕವೂ ಇಲ್ಲೇ ಉಳಿದವರು ಇದುವರೆಗೂ ದೇಶ ಬಿಟ್ಟು ಹೋಗಿಲ್ಲ. ಅವರು ಎಲ್ಲಿದ್ದಾರೆ ಎಂಬ ಮಾಹಿತಿ ಪೊಲೀಸರಿಗೂ ಗೊತ್ತಿಲ್ಲ.

‘ಅಕ್ರಮ ವಾಸಿಗಳನ್ನು ಪತ್ತೆ ಹಚ್ಚಲು ಪೊಲೀಸರು ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆ ವೇಳೆ ಸಿಕ್ಕ ಅಕ್ರಮ ವಾಸಿಗಳ ಬಗ್ಗೆ ಕೇಂದ್ರಕ್ಕೆ ಮಾಹಿತಿ ನೀಡುತ್ತಿದ್ದಾರೆ’ ಎಂದು ಪ್ರಾದೇಶಿಕ ನೋಂದಣಿ ಕೇಂದ್ರದ ಅಧಿಕಾರಿಯೊಬ್ಬರು ಕಳೆದ ವಾರ ತಿಳಿಸಿದ್ದರು.

‘ವೀಸಾ ಪಡೆದು ಬಂದವರ ಹೆಸರನ್ನಷ್ಟೇ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳಲಾಗುತ್ತದೆ. ಬಾಂಗ್ಲಾದೇಶ ಸೇರಿದಂತೆ ಯಾವುದಾದರೂ ದೇಶದಿಂದ ಅಕ್ರಮವಾಗಿ ನುಸುಳಿ ಬಂದವರ ಮಾಹಿತಿ ಗೊತ್ತಾಗುವುದಿಲ್ಲ. ಅಂಥ ನುಸುಳುಕೋರರು, ಹೆಚ್ಚಿನ ಸಂಖ್ಯೆಯಲ್ಲಿ ಇರಬಹುದು. ಅಂಥವರ ಮಾಹಿತಿ ಆಯಾ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಳಿಯೇ ಇರುತ್ತದೆ’ ಎಂದು ಹೇಳಿದ್ದರು.

* ಇದನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT