ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಎಂ.ಬಿ. ಪಾಟೀಲಗಿಂತ ಹಿರಿಯರು ಇದ್ದಾರೆ: ಶಿವಾನಂದ ಪಾಟೀಲ

Published : 6 ಸೆಪ್ಟೆಂಬರ್ 2024, 20:22 IST
Last Updated : 6 ಸೆಪ್ಟೆಂಬರ್ 2024, 20:22 IST
ಫಾಲೋ ಮಾಡಿ
Comments

ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ವಿಷಯದ ಚರ್ಚೆಯೇ ಅಪ್ರಸ್ತುತ. ಅಂತಹ ಸಮಯ ಎದುರಾದರೆ ಬೃಹತ್‌ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅವರಿಗಿಂತ ಹಿರಿಯರು ಕಾಂಗ್ರೆಸ್‌ನಲ್ಲಿ ಇದ್ದಾರೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು. 

ಗೃಹ ಸಚಿವ ಜಿ. ಪರಮೇಶ್ವರ, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅವರ ಸರಣಿ ಭೇಟಿಗಳು, ಮುಖ್ಯಮಂತ್ರಿ ಬದಲಾವಣೆ ವಿಚಾರ ಕುರಿತು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ಪ್ರಸ್ತುತ ಬೆಳವಣಿಗೆಗಳು, ಪಕ್ಷದ ವಿಚಾರಗಳ ಕುರಿತು ಚರ್ಚಿಸಿರಬಹುದು ಎಂದರು.

ಸಿದ್ದರಾಮಯ್ಯ ಅವರನ್ನು ಬದಲಾವಣೆ ಮಾಡಿದರೆ ಎಂ.ಬಿ. ಪಾಟೀಲ ಅವರಿಗೆ ಅವಕಾಶ ಸಿಗುತ್ತದೆಯೇ ಎಂಬ ಪ್ರಶ್ನೆಗೆ, ಅವರಿಗಿಂತ ಹಿರಿಯರು ಸಾಕಷ್ಟು ಮಂದಿ ಇದ್ದಾರೆ ಎಂದು ಉತ್ತರಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT