ನವದೆಹಲಿ: ‘ಕರ್ನಾಟಕದಲ್ಲಿ ಸದ್ಯಕ್ಕೆ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಹೀಗಾಗಿ, ಈ ವಿಚಾರವಾಗಿ ಚರ್ಚೆ ಮಾಡಲು ಈಗ ಸಮಯವಲ್ಲ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.

ಮಂಗಳವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ಪ್ರಭಾವಿ ನಾಯಕರು. ಅವರ ನಾಯಕತ್ವವನ್ನು ಪಕ್ಷ ಬಳಸಿಕೊಳ್ಳುತ್ತಿದೆ. ಇದೇ 15ರಂದು ರಾಷ್ಟ್ರಮಟ್ಟದ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಸಭೆಯು ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ನಡೆಯಲಿದೆ’ ಎಂದರು.

‘ಇದೇ 10ರಂದು ನಾನು, ಸಿದ್ದರಾಮಯ್ಯ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಸಭೆ ಮಾಡಲಿದ್ದು, ಪಕ್ಷದ ವಿಚಾರವಾಗಿ ಚರ್ಚೆ ಮಾಡಲಾಗುವುದು’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.