‘ಬಿಜೆಪಿ ಅಧಿಕಾರಾವಧಿಯ ಹಲವು ಹಗರಣಗಳು ತನಿಖಾ ಹಂತದಲ್ಲಿವೆ. ಈ ವಿಚಾರದಲ್ಲಿ ಹೊಂದಾಣಿಕೆ ರಾಜಕಾರಣ ಎಂಬ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಕೋವಿಡ್ ಹಗರಣಗಳ ಕುರಿತ ತನಿಖಾ ವರದಿ ಈ ತಿಂಗಳ ಅಂತ್ಯಕ್ಕೆ ಸರ್ಕಾರಕ್ಕೆ ಸಲ್ಲಿಕೆಯಾಗುವ ಸಾಧ್ಯತೆ ಇದೆ. ಅದರಲ್ಲಿ ಯಾವ ಅಂಶಗಳಿವೆ ಎಂಬುದು ಗೊತ್ತಿಲ್ಲ. ವರದಿ ಬಂದ ಬಳಿಕ ಚರ್ಚಿಸಿ, ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದರು.