ಬೆಲ್ಲದ್ ಪತ್ರ; ತಕ್ಷಣ ಕ್ರಮ
ಶಾಸಕ ಅರವಿಂದ ಬೆಲ್ಲದ್ ಅವರು ಧಾರವಾಡ ಪೊಲೀಸ್ ಆಯುಕ್ತರಿಗೆ ಬರೆದ ಪತ್ರವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು. ಗುಪ್ತಚರ ಇಲಾಖೆ ಮಾಹಿತಿ ಸಂಗ್ರಹಿಸುತ್ತಿದೆ. ರಾಜ್ಯದ ಎಲ್ಲ ಎಸ್.ಪಿಗಳಿಗೂ ಸೂಚನೆ ಕೊಟ್ಟಿದ್ದೇವೆ. ಶಂಕಿತರು ಕಂಡುಬಂದರೆ ಪರಿಶೀಲಿಸಿ ಅವರನ್ನು ವಾಪಸ್ ಕಳುಹಿಸಲು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದರು.