ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಯಾವುದೇ ರೀತಿಯ ಮುನಿಸು ಇಲ್ಲ. ಹುಬ್ಬಳ್ಳಿಯಲ್ಲಿ ನಡೆದ ಸಿಎಂ ಕಾರ್ಯಕ್ರಮದಲ್ಲಿ ನಾನು ಭಾಗವಹಿಸಲೇಬೇಕಾದ ಅನಿವಾರ್ಯತೆ ಇರಲಿಲ್ಲ ಎಂದು ಶಾಸಕ ಜಗದೀಶ ಶೆಟ್ಟರ್ ಹೇಳಿದರು.

ಹುಬ್ಬಳ್ಳಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೊಮ್ಮಾಯಿ ಅವರೊಂದಿಗೆ ನಾನು ಯಾವುದೇ ಅಂತರ ಕಾಯ್ದುಕೊಂಡಿಲ್ಲ. ಬೆಳಗಾವಿಯಲ್ಲಿ ಇತ್ತೀಚೆಗೆ ನಡೆದ ಸುರೇಶ ಅಂಗಡಿ ಅವರ ಕಾರ್ಯಕ್ರಮದಲ್ಲಿ ಇಬ್ಬರೂ ವೇದಿಕೆ ಹಂಚಿಕೊಂಡಿದ್ದೆವು. ಅಮಿತ್ ಶಾ ಭೇಟಿ ಸಂದರ್ಭದಲ್ಲೂ ಒಟ್ಟಿಗೆ ಇದ್ದೆವು. ಇದಕ್ಕೆ ಬೇರೆ ಅರ್ಥ ಕಲ್ಪಿಸಬಾರದು ಎಂದರು.

ತಾವು ಮುಖ್ಯಮಂತ್ರಿಯಾಗಿದ್ದಾಗ ಜಾತಿ ಗಣತಿಗೆ ಆದೇಶಿಸಿ, ಹಣವನ್ನೂ ಬಿಡುಗಡೆ ಮಾಡಿದ ಸಿದ್ದರಾಮಯ್ಯ ಅವರು ವರದಿಯನ್ನು ಯಾಕೆ ಬಿಡುಗಡೆ ಮಾಡಲಿಲ್ಲ. ತಮಗೆ ಆಗದಿದ್ದನ್ನು ಹಿಂದಿನ ಸಮ್ಮಿಶ್ರ ಸರ್ಕಾರದಲ್ಲಿ ಸಿ.ಎಂ ಆಗಿದ್ದ ಜೆಡಿಎಸ್‌ನ ಎಚ್.ಡಿ.ಕುಮಾರಸ್ವಾಮಿ ಹಾಗೂ ಈಗ ಬಿಜೆಪಿ ಸರ್ಕಾರದ ತಲೆಗೆ ಕಟ್ಟುತ್ತಿದ್ದಾರೆ. ವರದಿಯಲ್ಲಿ ಸಿದ್ದರಾಮಯ್ಯ ಅವರು ವಹಿಸಿರುವ ಪಾತ್ರ ಕುರಿತು ಪ್ರತ್ಯೇಕವಾಗಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡುವೆ. ನಮ್ಮ ಸರ್ಕಾರ ವರದಿಯನ್ನು ಒಪ್ಪಬೇಕೊ ಬೇಡವೊ ಎಂಬುದು ಕೇಂದ್ರದ ಮಟ್ಟದಲ್ಲಿ ತೀರ್ಮಾನವಾಗಬೇಕಿದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.