ಬೆಂಗಳೂರು: ಕೆಲ ಮಾಧ್ಯಮಗಳು ವರದಿ ಮಾಡಿರುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ದಾವಣಗೆರೆಯಲ್ಲಿ ಶನಿವಾರ ನಡೆಸಿದ ರೋಡ್ ಶೋ ವೇಳೆ ಭದ್ರತಾಲೋಪ ಆಗಿಲ್ಲ ಎಂದು ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ವಾಹನದ ಕಡೆಗೆ ನುಗ್ಗಿದ ವ್ಯಕ್ತಿಯನ್ನು ನಾನು ಮತ್ತು ಎಸ್ಪಿಜಿ ಪಡೆ ಖುದ್ದು ವಶಕ್ಕೆ ಪಡೆದಿದ್ದೇವೆ. ಅದೊಂದು ವಿಫಲ ಯತ್ನವಾಗಿತ್ತು. ಮೋದಿಯವರ ವಾಹನದಿಂದ ಬಹಳ ದೂರದಲ್ಲೇ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ. ವ್ಯಕ್ತಿ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗಿದೆ ಎಂದೂ ಅವರು ತಿಳಿಸಿದ್ದಾರೆ.

ಈ ಕುರಿತಾದ ವಿಡಿಯೊವನ್ನೂ ಅವರು ಹಂಚಿಕೊಂಡಿದ್ದಾರೆ.

ದಾವಣಗೆರೆಯಲ್ಲಿ ಮೋದಿ ಅವರು ತೆರಳುತ್ತಿದ್ದ ವಾಹನದತ್ತ ವ್ಯಕ್ತಿಯೊಬ್ಬ ನುಗ್ಗಲು ಯತ್ನಿಸಿದ್ದ.

ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭ ಮಹಾಸಂಗಮದಲ್ಲಿ ಭಾಗವಹಿಸಲು ಮೋದಿ ಅವರು ಇಂದು ರಾಜ್ಯಕ್ಕೆ ಆಗಮಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.