ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

ನನ್ನ- ಐಶ್ವರ್ಯ ಗೌಡ ನಡುವೆ ಯಾವುದೇ ಹಣಕಾಸಿನ ವಹಿವಾಟು ನಡೆದಿಲ್ಲ: ಡಿ.ಕೆ. ಸುರೇಶ್

Published : 23 ಜೂನ್ 2025, 6:30 IST
Last Updated : 23 ಜೂನ್ 2025, 6:30 IST
ಫಾಲೋ ಮಾಡಿ
0
ನನ್ನ- ಐಶ್ವರ್ಯ ಗೌಡ ನಡುವೆ ಯಾವುದೇ ಹಣಕಾಸಿನ ವಹಿವಾಟು ನಡೆದಿಲ್ಲ: ಡಿ.ಕೆ. ಸುರೇಶ್
ಡಿ.ಕೆ. ಸುರೇಶ್

ಬೆಂಗಳೂರು: 'ಜಾರಿ ನಿರ್ದೇಶನಾಲಯದ (ಇಡಿ) ವಿಚಾರಣೆಗೆ ಹಾಜರಾಗಿ, ಸಂಪೂರ್ಣ ಸಹಕಾರ ನೀಡುತ್ತೇನೆ. ಯಾವ ಮಾನದಂಡ ಇಟ್ಟುಕೊಂಡು ನನ್ನನ್ನು ವಿಚಾರಣೆಗೆ ಕರೆದಿದ್ದಾರೆ ಎನ್ನುವುದನ್ನು ತಿಳಿದುಕೊಳ್ಳುವೆ' ಎಂದು ಬಮೂಲ್ ಅಧ್ಯಕ್ಷರೂ ಆಗಿರುವ ಮಾಜಿ ಸಂಸದ ಡಿ‌. ಕೆ. ಸುರೇಶ್ ಹೇಳಿದರು.

ADVERTISEMENT
ADVERTISEMENT

ಐಶ್ವರ್ಯ ಗೌಡ ವಂಚನೆ ಪ್ರಕಣದಲ್ಲಿ ಇಡಿ ನೋಟಿಸ್ ರಾಜಕೀಯ ಷಡ್ಯಂತ್ರವೇ' ಎಂಬ ಸುದ್ದಿಗಾರರ ಪ್ರಶ್ನೆಗೆ, 'ವಿಚಾರಣೆಗೆ ಹೋದಾಗ ಆ ಬಗ್ಗೆ ತಿಳಿಯುತ್ತದೆ. ಅವರ ಪ್ರಶ್ನೆಗಳು ಯಾವ ಹಾದಿಯಲ್ಲಿವೆ, ವಿಚಾರಣೆಗೂ ಪ್ರಕರಣಕ್ಕೂ ಸಂಬಂಧ ಇದೆಯೇ? ಎಂದು ತಿಳಿಯುತ್ತದೆ. ಜೊತೆಯಲ್ಲಿ ವಕೀಲರು ಇರುತ್ತಾರೆ. ನಂತರ ಯಾವುದಕ್ಕೆ ಸಂಬಂಧ‌ವಿದೆ, ಅಸಂಬದ್ಧವಾಗಿದೆ ಎನ್ನುವುದರ ಬಗ್ಗೆ ಚರ್ಚೆ ನಡೆಸುತ್ತೇವೆ' ಎಂದರು.

'ಇಡಿ ಎಲ್ಲೆ ಮೀರಿ ವರ್ತಿಸುತ್ತಿದೆ ಎಂದು ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್ ಅನೇಕ‌ ಬಾರಿ ಹೇಳಿವೆ. ಆದಾಗ್ಯೂ ಎಚ್ಚೆತ್ತುಕೊಂಡಿಲ್ಲ ಎಂದರೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ಉಂಟಾಗುತ್ತಿದೆ ಎಂದರ್ಥ. ಅವರ ವ್ಯಾಪ್ತಿಯನ್ನು ಮೀರಿ ಪ್ರಕರಣಗಳನ್ನು ದಾಖಲು ಮಾಡಿಕೊಳ್ಳುವುದು ನೋಡಿದರೆ ಸರ್ಕಾರವೊಂದರ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ ಎನಿಸುತ್ತಿದೆ' ಎಂದರು.

'ಐಶ್ವರ್ಯ ಗೌಡ ಮತ್ತು‌ ನಿಮ್ಮ ನಡುವೆ ಹಣಕಾಸಿನ ವ್ಯವಹಾರ ನಡೆದಿದೆಯೇ?' ಎಂದಾಗ, "ಆ ಮಹಿಳೆ ಹಾಗೂ ನಮ್ಮ ನಡುವೆ ಯಾವುದೇ ಹಣಕಾಸು ಹಾಗೂ ಇತರೇ ವಹಿವಾಟು ನಡೆದಿಲ್ಲ. ಅವರು ಮೂರ್ನಾಲ್ಕು ಬಾರಿ ಗೃಹ ಕಚೇರಿಯಲ್ಲಿ ಭೇಟಿ ಮಾಡಿ ಕೆಲವೊಂದು ವಿಚಾರಗಳನ್ನು ಚರ್ಚೆ ಮಾಡಿದ್ದಾರೆ. ನನ್ನ ಕ್ಷೇತ್ರದಲ್ಲಿ ವಾಸ ಮಾಡುತ್ತಿದ್ದರು ಎನ್ನುವ ಕಾರಣಕ್ಕೆ ಅವರ ಆಯೋಜನೆಯ ಕಾರ್ಯಕ್ರಮಗಳಿಗೆ ಹೋಗಿದ್ದೇನೆ. ಇದರ ಹೊರತಾಗಿ ಬೇರೇನೂ ಇಲ್ಲ. ಇದರ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ನೀಡುತ್ತೇನೆ' ಎಂದು ಸ್ಪಷ್ಟವಾಗಿ ನುಡಿದರು.

ADVERTISEMENT

ನಟರೊಬ್ಬರು ನಿಮ್ಮ ದನಿ ಅನುಕರಣೆ ಮಾಡಿ ವಂಚನೆ ಎಸಗಿರುವ ಬಗ್ಗೆ ಕೇಳಿದಾಗ, 'ಈ ಬಗ್ಗೆ ನಾನು ಮಾಧ್ಯಮಗಳ ಮೂಲಕ ತಿಳಿದುಕೊಂಡಿದ್ದೇನೆ. ಈ ಕುರಿತು ಪೊಲೀಸ್ ತನಿಖೆ ನಡೆಯುತ್ತಿದೆ. ಈ ತನಿಖೆಯ ಬೆಳವಣಿಗೆ ಏನಾಗಿದೆ ಎಂಬುದರ ಬಗ್ಗೆ ನನಗೆ ಮಾಹಿತಿಯಿಲ್ಲ' ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
Comments0