ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನಟ ದರ್ಶನ್‌ ಸ್ಥಳಾಂತರಕ್ಕೆ ಆಲೋಚನೆ; ಅಧಿಕಾರಿಗಳ ಮಟ್ಟದಲ್ಲಿ ನಿರ್ಧಾರ: CM

Published 26 ಆಗಸ್ಟ್ 2024, 10:45 IST
Last Updated 26 ಆಗಸ್ಟ್ 2024, 10:45 IST
ಅಕ್ಷರ ಗಾತ್ರ

ಬೆಳಗಾವಿ: ‘ಕೊಲೆ ಆರೋಪಿ, ನಟ ದರ್ಶನ್‌ ಅವರನ್ನು ಪರಪ್ಪನ ಅಗ್ರಹಾರದಿಂದ ಬೇರೆಡೆ ಸ್ಥಳಾಂತರಿಸುವ ಆಲೋಚನೆ ನಡೆದಿದೆ. ಅಧಿಕಾರಿಗಳ ಮಟ್ಟದಲ್ಲಿ ನಿರ್ಧಾರ ಮಾಡುತ್ತಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸಮೀಪದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸೋಮವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಬೇಕೋ, ಬೇರೆಡೆ ಕಳಿಸಬೇಕೋ ಎಂಬುದನ್ನು ಇನ್ನೂ ನಿರ್ಧರಿಸಿಲ್ಲ’ ಎಂದರು.

‘ಜೈಲಿನಲ್ಲಿ ವಿಶೇಷ ಆತಿಥ್ಯ ನೀಡಿದ ವಿಚಾರವಾಗಿ ಏಳು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಗೃಹಸಚಿವ ಡಾ.ಜಿ.ಪರಮೇಶ್ವರ ಅವರು ಖುದ್ದು ಪರಿಶೀಲನೆ ನಡೆಸಲಿದ್ದಾರೆ. ಇನ್ನೂ ಯಾರ್‍ಯಾರ ಮೇಲೆ ಕ್ರಮ ಜರುಗಿಸಬೇಕೋ ಅದನ್ನು ಮಾಡುತ್ತೇವೆ’ ಎಂದರು.

‘ಸಿದ್ದರಾಮಯ್ಯ ಸರ್ಕಾರ ಕೇವಲ ದುಡ್ಡಿದ್ದವರ ಪರ’ ಎಂಬ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ‘ನಾವು ಐದು ಗ್ಯಾರಂಟಿಗಳನ್ನು ಬಡವರಿಗಾಗಿ ಜಾರಿ ಮಾಡಿದ್ದೇವೆ. ಅವರೇನು ಮಾಡಿದ್ದಾರೆ? ಬಡವರಿಗೆ ಏನಾದರೂ ಮಾಡಿದ್ದರೆ ಹೇಳಲಿ ನೋಡೋಣ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT