ವಿಜಯಪುರ: ಭೀಮಾ ತೀರದ ರೌಡಿ ಗಂಗಾಧರ ಚಡಚಣನ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಮೂವರು ಮಂಗಳವಾರ ಸಂಜೆ ಇಂಡಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.

ಕೊಲೆ ಪ್ರಕರಣದ ಒಂದನೇ ಆರೋಪಿ, ಕಾಂಗ್ರೆಸ್ ಮುಖಂಡ ಮಹಾದೇವ ಭೈರಗೊಂಡನ ಅಳಿಯ ಸಿದ್ಧಗೊಂಡ ಮುಡವೆ, ಈಗಾಗಲೇ ಬಂಧಿತನಾಗಿರುವ ಹಣಮಂತ ಪೂಜಾರಿ ಸಹೋದರ ಭೀಮು ಪೂಜಾರಿ, ಚಡಚಣದ ಚಾಂದ್ ಹುಸೇನಿ ಚಡಚಣ ಶರಣಾದವರು.

ಆರೋಪಿಗಳು ಶರಣಾಗುತ್ತಿದ್ದಂತೆಯೇ, ಸಿಐಡಿ ಪೊಲೀಸರು ಸಹ ವಿಚಾರಣೆಗಾಗಿ ಅವರನ್ನು ತಮ್ಮ ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ನ್ಯಾಯಾಂಗ ಬಂಧನದಲ್ಲಿರುವ ಆರು ಆರೋಪಿಗಳ ಬಂಧನದ ಅವಧಿ ಗುರುವಾರ (ಜೂನ್ 28) ಮುಗಿಯಲಿದ್ದು, ಪೊಲೀಸರು ನ್ಯಾಯಾಲಯಕ್ಕೆ ಮತ್ತೆ ಹಾಜರುಪಡಿಸಲಿದ್ದಾರೆ ಎನ್ನಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 13 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಇಲ್ಲಿಯವರೆಗೂ ಒಂಬತ್ತು ಮಂದಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಉಳಿದ ನಾಲ್ವರಿಗಾಗಿ ಸಿಐಡಿ ಪೊಲೀಸರು ಶೋಧ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.