ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ತುಮಕೂರು | ಭಸ್ಮವಾಗಿರುವ ಕಾರಿನಲ್ಲಿ ಮೂರು ಮೃತದೇಹ ಪತ್ತೆ; ಕೊಲೆ ಶಂಕೆ

Published : 22 ಮಾರ್ಚ್ 2024, 10:51 IST
Last Updated : 22 ಮಾರ್ಚ್ 2024, 10:51 IST
ಫಾಲೋ ಮಾಡಿ
Comments

ತುಮಕೂರು: ತಾಲ್ಲೂಕಿನ ಕುಚ್ಚಂಗಿ ಕೆರೆ ಅಂಗಳದಲ್ಲಿ ಶುಕ್ರವಾರ ಭಸ್ಮವಾಗಿರುವ ಸ್ಥಿತಿಯಲ್ಲಿ ಮಾರುತಿ ಸ್ವಿಫ್ಟ್‌ ಕಾರು ಪತ್ತೆಯಾಗಿದ್ದು, ಮೂರು ಮೃತ ದೇಹಗಳು ಸಿಕ್ಕಿವೆ.

ಕಾರಿನ ಡಿಕ್ಕಿಯಲ್ಲಿ ಎರಡು, ಮಧ್ಯದ ಸೀಟಿನಲ್ಲಿ ಒಂದು ದೇಹ ಪತ್ತೆಯಾಗಿದೆ. ದೇಹಗಳು, ಗಂಡು ಅಥವಾ ಹೆಣ್ಣು ಎಂಬುದನ್ನು ಪತ್ತೆಮಾಡಲಾಗದಷ್ಟು ಸುಟ್ಟು ಕರಕಲಾಗಿವೆ.

ಕಾರು ನೋಂದಣಿ ಸಂಖ್ಯೆಯ ಆಧಾರದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಗೆ ಸೇರಿದ್ದು ಎಂಬ ವಿಚಾರ ಗೊತ್ತಾಗಿದೆ. ಕಾರಿನ ಡಿಕ್ಕಿಯಲ್ಲಿ ಶವ ಸಿಕ್ಕಿರುವುದನ್ನು ಗಮನಿಸಿದರೆ ಕೊಲೆ ಮಾಡಿ ಕಾರಿಗೆ ಬೆಂಕಿ ಹಚ್ಚಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಗುರುವಾರ ರಾತ್ರಿ ಘಟನೆ ಸಂಭವಿಸಿರಬಹುದು, ಶುಕ್ರವಾರ ಮಧ್ಯಾಹ್ನ ಗಮನಕ್ಕೆ ಬಂದಿದೆ. ತನಿಖೆ ಮುಂದುವರಿದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT