ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾಮತಿ: ವ್ಯಾನ್‌ಗೆ ಬಸ್‌ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು

Published 11 ಏಪ್ರಿಲ್ 2024, 22:30 IST
Last Updated 11 ಏಪ್ರಿಲ್ 2024, 22:30 IST
ಅಕ್ಷರ ಗಾತ್ರ

ನ್ಯಾಮತಿ (ದಾವಣಗೆರೆ ಜಿಲ್ಲೆ): ತಾಲ್ಲೂಕಿನ ಚಿನ್ನಿಕಟ್ಟೆ ಬಳಿ, ಶಿವಮೊಗ್ಗ- ಶಿಕಾರಿಪುರ ರಸ್ತೆಯಲ್ಲಿ ಗುರುವಾರ ಬೆಳಿಗ್ಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಬಸ್ ಹಾಗೂ ಒಮಿನಿ ವ್ಯಾನ್‌ ನಡುವೆ ಡಿಕ್ಕಿ ಸಂಭವಿಸಿ ವ್ಯಾನ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತಾಲ್ಲೂಕಿನ ಹರಮಘಟ್ಟ ಗ್ರಾಮದ ನಂಜುಂಡಪ್ಪ (83), ವ್ಯಾನ್‌ ಚಾಲಕ ದೇವರಾಜ (27) ಹಾಗೂ ಸೂರಗೊಂಡನಕೊಪ್ಪ ಗ್ರಾಮದ ರಾಕೇಶ (30) ಮೃತರು.

ಒಮಿನಿ ವ್ಯಾನ್‌ ಹರಮಘಟ್ಟದಿಂದ ಸವಳಂಗ ಮಾರ್ಗವಾಗಿ ಶಿಕಾರಿಪುರದತ್ತ ಹೋರಟಿತ್ತು. ಸಾರಿಗೆ ಸಂಸ್ಥೆ ಬಸ್‌ ಶಿಕಾರಿಪುರದಿಂದ ಶಿವಮೊಗ್ಗ ಕಡೆ ಹೊರಟಿತ್ತು. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಬಸ್ ರಸ್ತೆ ಪಕ್ಕದ ತಡೆಗೋಡೆಗೆ ಗುದ್ದಿದೆ.

ಒಮಿನಿ ಹಾಗೂ ಬಸ್‌ನಲ್ಲಿದ್ದ ಕೆಲವು ಪ್ರಯಾಣಿಕರಿಗೆ ಗಾಯಗಳಾಗಿವೆ. ಈ ಕುರಿತು ನ್ಯಾಮತಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT