ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂವರು ಮಾಜಿ ಶಾಸಕರು ಬಿಜೆಪಿ ಸೇರ್ಪಡೆ

Published 14 ಮಾರ್ಚ್ 2024, 15:07 IST
Last Updated 14 ಮಾರ್ಚ್ 2024, 15:07 IST
ಅಕ್ಷರ ಗಾತ್ರ

ಬೆಂಗಳೂರು: ಮಾಜಿ ಸಚಿವ ಕಲಬುರಗಿಯ ಬಾಬುರಾವ್‌ ಚವ್ಹಾಣ್‌, ಬೈಲಹೊಂಗಲದ ಮಾಜಿ ಶಾಸಕ ವಿಶ್ವನಾಥ ಪಾಟೀಲ, ಜಗಳೂರಿನ ಮಾಜಿ ಶಾಸಕ ಎಚ್.ಪಿ. ರಾಜೇಶ್ ಹಾಗೂ ಶಿಗ್ಗಾಂವಿಯ ಮುಖಂಡ ಶಶಿಧರ್ ಯಲಿಗಾರ್ ಅವರು ಗುರುವಾರ ಬಿಜೆಪಿ ಸೇರಿದರು.

ಬಿಜೆಪಿ ಕಚೇರಿಯಲ್ಲಿ ಅವರಿಗೆ ಪಕ್ಷದ ಬಾವುಟ ನೀಡಿ ಬರಮಾಡಿಕೊಂಡ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮಾತನಾಡಿ, ‘ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಮಂತ್ರಿ ಆಗಬೇಕೆಂಬ ಇಚ್ಛೆ ರಾಜ್ಯದ ಜನರಲ್ಲಿದೆ. ಅದಕ್ಕೆ ಪೂರಕವಾದ ವಾತಾವರಣ ಸೃಷ್ಟಿಯಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಮುಖಂಡರು ಬಿಜೆಪಿ ಸೇರಲಿದ್ದಾರೆ. ಪಕ್ಷದ ಸಿದ್ಧಾಂತ ಒಪ್ಪಿಕೊಂಡು ಬರುವರನ್ನು ಸ್ವಾಗತಿಸುತ್ತೇವೆ’ ಎಂದರು.  

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ಶಾಸಕರಾದ ಬಸವರಾಜ ಬೊಮ್ಮಾಯಿ, ಶರಣು ಸಲಗರ, ಮಾಜಿ ಸಚಿವ ಸಿ.ಟಿ. ರವಿ,  ಕೋಲಾರ ಸಂಸದ ಎಸ್. ಮುನಿಸ್ವಾಮಿ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಜಿ.ವಿ. ರಾಜೇಶ್‌, ಪ್ರಧಾನ ಕಾರ್ಯದರ್ಶಿಗಳಾದ ಪ್ರೀತಮ್ ಗೌಡ, ಶರಣು ತಳ್ಳಿಕೇರಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT