ಸೋಮವಾರ, 3 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಸ್‌ಐ ಪ್ರಕರಣ: ಮತ್ತೆ ಮೂವರ ಬಂಧನ

ಅಕ್ರಮದಲ್ಲಿ ಆರ್‌.ಡಿ. ಪಾಟೀಲ ಸೋದರಳಿಯನೂ ಭಾಗಿ
Last Updated 1 ಜೂನ್ 2022, 13:27 IST
ಅಕ್ಷರ ಗಾತ್ರ

ಕಲಬುರಗಿ: ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಬುಧವಾರ ಪ್ರಮುಖ ಆರೋಪಿ ಆರ್‌.ಡಿ. ಪಾಟೀಲ ಸಹಚರರಾದ ಮೂವರನ್ನು ಬಂಧಿಸಿದ್ದಾರೆ.

ಆರ್‌.ಡಿ. ಪಾಟೀಲ ಸೋದರಳಿಯ ಆಳಂದ ತಾಲ್ಲೂಕಿನ ಜಾವಳಿ (ಡಿ) ಗ್ರಾಮದ ಪ್ರಕಾಶ ಬಸವರಾಜ ಉಡಗಿ, ಅಫಜಲಪುರ ತಾಲ್ಲೂಕು ಮಣೂರ ಗ್ರಾಮದ ಅಸ್ಲಂ ಸೈಫುನ್ ಮುಲ್ಕ್ ಮುಜಾವರ ಹಾಗೂ ಮುನಾಫ್ ಜಮಾದಾರ ಬಂಧಿತರು. ಇವರು ಪಿಎಸ್ಐ ಸ್ಪರ್ಧಾತ್ಮಕ ಪರೀಕ್ಷೆ ವೇಳೆ ಪ್ರಶ್ನೆಪತ್ರಿಕೆಗಳನ್ನು ಸೋರಿಕೆ ಮಾಡಿ, ಅಭ್ಯರ್ಥಿಗಳಿಗೆ ಉತ್ತರ ತಲುಪಿಸುವ ಕಾರ್ಯವನ್ನು ಮಾಡುತ್ತಿದ್ದರು ಎಂದು ಗೊತ್ತಾಗಿದೆ.

ಧಾರವಾಡದ ಸಾಮಾಜಿಕ ಹೋರಾಟಗಾರ ರವಿಶಂಕರ್ ಎಂಬುವವರಿಗೆ ಅಸ್ಲಂ ಮುಜಾವರ ವಾಟ್ಸ‌್ ಆ್ಯಪ್‌ನಲ್ಲಿ ಬೆದರಿಕೆ ಹಾಕಿದ್ದ. ಈ ಬಗ್ಗೆ ರವಿಶಂಕರ್ ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

‘ನಮ್ಮ ಗೌಡರ (ಆರ್‌.ಡಿ.ಪಾಟೀಲ) ತಂಟೆಗೆ ಬಂದರೆ ನಿನ್ನನ್ನು ಮುಗಿಸುತ್ತೇವೆ. ಅಫಜಲಪುರದ ಪವರ್ ಏನು ಎಂಬುದು ತೋರಿಸುತ್ತೇವೆ’ ಎಂದು ವಾಟ್ಸ್‌ಆ್ಯಪ್‌ನಲ್ಲಿ ಬೆದರಿಕೆ ಹಾಕಿದ್ದ. ವಾಟ್ಸ್‌ಆ್ಯಪ್ ಬೆದರಿಕೆಯ ವಿವರಗಳನ್ನು ಸಿಐಡಿ ಅಧಿಕಾರಿಗಳಿಗೆ ಕಳುಹಿಸಿದ್ದರು.

ಪಿಎಸ್‌ಐ ಪ್ರಕರಣ ಬೆಳಕಿಗೆ ಬಂದಾಗಿನಿಂದಲೇ ಇವರ ಹುಡುಕಾಟದಲ್ಲಿದ್ದ ಸಿಐಡಿ ತನಿಖಾಧಿಕಾರಿಗಳಾದ ಪ್ರಕಾಶ ರಾಠೋಡ, ವೀರೇಂದ್ರ ಹಾಗೂ ಶಂಕರಗೌಡ ಪಾಟೀಲ ನೇತೃತ್ವದ ತಂಡವು ಬುಧವಾರ ಮೂವರನ್ನೂ ಬಂಧಿಸಿತು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT