ಬೆಂಗಳೂರು: ರಾಜ್ಯ ವಿಧಾನಸಭೆಗೆ ನಡೆಯಲಿರುವ ಚುನಾವಣೆಗೆ ಮೊದಲ ಹಂತದಲ್ಲಿ 140 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲು ಕಾಂಗ್ರೆಸ್ ಮುಂದಾಗಿದೆ.

ಶುಕ್ರವಾರ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಈ ಮಾಹಿತಿ ನೀಡಿದ್ದಾರೆ.

ಸುಮಾರು ಎರಡೂವರೆ ಗಂಟೆಗಳ ಕಾಲ ನಡೆದ ಸಭೆಯಲ್ಲಿ ಚುನಾವಣಾ ರಣತಂತ್ರ ಕುರಿತು ಗಂಭೀರ ಸಮಾಲೋಚನೆ ನಡೆಯಿತು.

ಮಾರ್ಚ್ ತಿಂಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ಎಲ್ಲರೂ ಒಟ್ಟಾಗಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಸಲಹೆ ನೀಡಿದ್ದಾರೆ.

‘ಪಕ್ಷ ಅಧಿಕಾರಕ್ಕೆ ಬಂದರೆ ಸಹಜವಾಗಿಯೇ ಎಲ್ಲರಿಗೂ ಅಧಿಕಾರ ಸಿಗಲಿದೆ. ಹೀಗಾಗಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಟಿಕೆಟ್ ಸಿಗದೆ ಇದ್ದರೆ ಬಂಡಾಯಕ್ಕೆ ಅವಕಾಶ ನೀಡದಂತೆ ನೋಡಿಕೊಳ್ಳಬೇಕಿದೆ. ಮೊದಲ ಹಂತದಲ್ಲಿ ಕನಿಷ್ಠ 140 ಕ್ಷೇತ್ರಗಳಿಗೆ ಟಿಕೆಟ್ ಘೋಷಿಸಬೇಕೆಂದು ವರಿಷ್ಠರಿಗೆ ಶಿಫಾರಸು ಮಾಡಲಾಗಿದೆ. ಮಾರ್ಚ್ 10ರೊಳಗೆ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಘೋಷಣೆಯಾಗಲಿದೆ ಎಂದು ಸಭೆಗೆ ಅವರು ಮಾಹಿತಿ ನೀಡಿದ್ದಾರೆ.

ಇದೇ ವೇಳೆ ಬಜೆಟ್ ವಿಚಾರವಾಗಿಯೂ ಪಕ್ಷದ ಶಾಸಕರಿಗೆ ಸಭೆಯಲ್ಲಿ ಕೆಲವೊಂದು ಕಿವಿಮಾತು ಹೇಳಿದ ಪಕ್ಷದ ನಾಯಕರು, ‘ಸರ್ಕಾರ ಮಂಡಿಸಿರುವ ಬಜೆಟ್ನಲ್ಲಿ ಏನೂ ಇಲ್ಲ. ಇದೊಂದು ಚುನಾವಣಾ ಗಿಮಿಕ್ ಬಜೆಟ್. ಯಾವುದೇ ಕಾರ್ಯಕ್ರಮಗಳನ್ನು ರೂಪಿಸಿಲ್ಲ. ಇದನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕಿದೆ. ಸದನ ಒಳಗೆ ಮತ್ತು ಹೊರಗೆ ಬಜೆಟ್ ಬಗ್ಗೆ ವಾಸ್ತವಾಂಶ ಬಿಚ್ಚಿಡಬೇಕು’ ಎಂದು ಸಲಹೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.