ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Tiger Claw: ಸಚಿವೆ ಲಕ್ಷ್ಮೀ ಹೆಬ್ಬಾಳಕರ ಪುತ್ರನ ಕೊರಳಲ್ಲಿ ಹುಲಿ ಉಗುರಿನ ಸರ

Published 26 ಅಕ್ಟೋಬರ್ 2023, 15:27 IST
Last Updated 26 ಅಕ್ಟೋಬರ್ 2023, 15:27 IST
ಅಕ್ಷರ ಗಾತ್ರ

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರ ಪುತ್ರ ಮೃಣಾಲ್‌ ಮತ್ತು ಸಂಬಂಧಿ ರಜತ್‌ ಉಳ್ಳಾಗಡ್ಡಿಮಠ ಅವರ ಕೊರಳಲ್ಲಿ ಹುಲಿ ಉಗುರಿನ ಸರ ಇರುವ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಮೃಣಾಲ್‌ ಅವರು ಮದುವೆ ಸಮಾರಂಭದಲ್ಲಿ ಧರಿಸಿದ ಚಿನ್ನದ ಸರಗಳಲ್ಲಿ ಒಂದೊಂದು ಹುಲಿ ಉಗುರು ಇವೆ. ಅವರು ತಮ್ಮ ಫೇಸ್‌ಬುಕ್‌ ಪುಟದಲ್ಲಿ ಹಾಕಿದ ಫೋಟೊಗಳು ಎಲ್ಲೆಡೆ ಹರಿದಾಡುತ್ತಿವೆ.

‘ಪ್ರಕರಣ ಗಮನಕ್ಕೆ ಬಂದಿದೆ. ಸಂಬಂಧಪಟ್ಟವರಿಗೆ ಇಲಾಖೆಯಿಂದ ನೋಟಿಸ್‌ ಜಾರಿ ಮಾಡಲಾಗುವುದು. ಸರವನ್ನು ತರಿಸಿಕೊಂಡು ತಪಾಸಣೆ ಮಾಡಿದ ಬಳಿಕ, ನೈಜತೆ ಆಧರಿಸಿ ಮುಂದಿನ ಕ್ರಮ ತಗೆದುಕೊಳ್ಳಲಾಗುವುದು’ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಶಂಕರ ಕಲ್ಲೋಳಿಕರ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT