ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Tiger Claw Row | ಜಗ್ಗೇಶ್‌ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ

Published 30 ಅಕ್ಟೋಬರ್ 2023, 15:38 IST
Last Updated 31 ಅಕ್ಟೋಬರ್ 2023, 2:47 IST
ಅಕ್ಷರ ಗಾತ್ರ

ಬೆಂಗಳೂರು: ಹುಲಿ ಉಗುರಿನ ಪದಕವನ್ನು ಧರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಸದಸ್ಯ ಹಾಗೂ ನಟ ಜಗ್ಗೇಶ್‌ ವಿರುದ್ಧ ಅರಣ್ಯ ಇಲಾಖೆಯ ಮುಂದಿನ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ಮಧ್ಯಂತರ ತಡೆ ವಿಧಿಸಿದೆ.

ಈ ಸಂಬಂಧ ಜಗ್ಗೇಶ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. ‘ವಶಪಡಿಸಿಕೊಂಡಿರುವ ಪದಕದ ಮೇಲೆ ನೀಡಲಾಗುವ ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್‌) ವರದಿಯು ಅರ್ಜಿಯ ಅಂತಿಮ ವಿಚಾರಣೆಗೆ ಒಳಪಟ್ಟಿರುತ್ತದೆ‘ ಎಂದು ತಿಳಿಸಿದ ನ್ಯಾಯಪೀಠ ವಿಚಾರಣೆಯನ್ನು ನವೆಂಬರ್ 29ಕ್ಕೆ ಮುಂದೂಡಿದೆ. 

ವಿಚಾರಣೆ ವೇಳೆ ಜಗ್ಗೇಶ್‌ ಪರ ವಾದ ಮಂಡಿಸಿದ ಹಿರಿಯ ವಕೀಲ ಪ್ರಭುಲಿಂಗ ಕೆ. ನಾವದಗಿ, ‘ಸಾಮಾಜಿಕ ಜಾಲತಾಣದಲ್ಲಿನ ಚಿತ್ರವನ್ನು ಆಧರಿಸಿ ನೋಟಿಸ್‌ ನೀಡಿದ ಒಂದೇ ತಾಸಿನಲ್ಲಿ 14 ಅಧಿಕಾರಿಗಳ ತಂಡ ಜಗ್ಗೇಶ್‌ ಅವರ ಮನೆಯಲ್ಲಿ ಶೋಧ ನಡೆಸಿದೆ. ಶೋಧದ ಬಳಿಕ ಅರ್ಜಿದಾರರ ಮನೆಯ ಹೊರಗೆ ಮಾಧ್ಯಮಗೋಷ್ಠಿ ನಡೆಸಲಾಗಿದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ–1972ರ ಕಲಂ 39 ಮತ್ತು 40 ಈ ಪ್ರಕರಣಕ್ಕೆ ಅನ್ವಯಿಸುವುದಿಲ್ಲ‘ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ನೋಟಿಸ್‌ಗೆ ಪ್ರತಿಕ್ರಿಯೆ ಸಲ್ಲಿಸುವವರೆಗೂ ನೀವು ಮೌನವಾಗಿರಬೇಕಿತ್ತಲ್ಲವೇ? ಇದು ನಿಯಮಬಾಹಿರವಲ್ಲವೇ? ಅವರು ನಕಲಿ ಪೆಂಡೆಂಟ್‌ ನೀಡುತ್ತಾರೆ ಎಂಬುದು ನಿಮ್ಮ ಗಮನಕ್ಕೆ ಹೇಗೆ ಬಂತು? ಒಂದು ಗಂಟೆಯಲ್ಲಿ ನಿಮಗೆ ಸಿಕ್ಕ ಆ ಸುದ್ದಿಯ ಮೂಲ ಯಾವುದು? ನಿಮ್ಮ ಪ್ರಚಾರವು ಈ ರೀತಿ ಇರಬಾರದು‘ ಎಂದು ಪ್ರಾಸಿಕ್ಯೂಷನ್‌ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿತು.

‘ಅರಣ್ಯ ಸಂಚಾರಿ ದಳದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ 2023ರ ಅಕ್ಟೋಬರ್ 25ರಂದು ನನಗೆ ನೋಟಿಸ್ ಜಾರಿ ಮಾಡಿದ್ದಾರೆ. ಬೆಂಗಳೂರಿನ ನನ್ನ ಮನೆಯಲ್ಲಿ 14 ಜನ ಅರಣ್ಯ ಇಲಾಖೆ ಅಧಿಕಾರಿಗಳ ತಂಡ ಅಕ್ರಮವಾಗಿ ಶೋಧ ನಡೆಸಿದೆ. ಇದು ಸಂವಿಧಾನದ 21ನೇ ವಿಧಿಯ ಉಲ್ಲಂಘನೆ‘ ಎಂದು ಆಕ್ಷೇಪಿಸಿ ಜಗ್ಗೇಶ್‌ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT