ಬೆಂಗಳೂರು: ಚಾಮರಾಜನಗರ ಜಿಲ್ಲೆಯಲ್ಲಿ ನಡೆದ ಐದು ಹುಲಿಗಳ ಸಾವಿನ ಪ್ರಕರಣದ ಮಧ್ಯಂತರ ವರದಿ ಲಭ್ಯವಾಗಿದ್ದು, ಗಡಿ ರಾಜ್ಯಗಳ ಜತೆ ಚರ್ಚೆ ನಡೆಸಿದ ನಂತರ ವನ್ಯಜೀವಿಗಳ ಸಂರಕ್ಷಣೆಗೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರ ಪರಿಸರ ಹಾಗೂ ಅರಣ್ಯ ಸಚಿವ ಭೂಪೇಂದರ್ ಯಾದವ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ‘ಹುಲಿ ಸಾವಿನ ಪ್ರಕರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಅಂತರರಾಜ್ಯ ಗಡಿ ಪ್ರದೇಶದಲ್ಲಿರುವ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಈ ಘಟನೆ ನಡೆದಿರುವುದು ಕಳವಳಕಾರಿ ಸಂಗತಿ. ಈಗಷ್ಟೇ ಮಧ್ಯಂತರ ವರದಿ ಕೈಸೇರಿದ್ದು, ಪರಿಶೀಲನೆ ನಡೆಸಲಾಗುತ್ತಿದೆ. ಸಂರಕ್ಷಣೆಯ ಲೋಪಗಳತ್ತ ಗಮನ ನೀಡಲಾಗುತ್ತದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.