ಬೆಂಗಳೂರು: ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವಲಯದಲ್ಲಿ ವಿಷ ಪ್ರಾಷನದಿಂದ ಹುಲಿಗಳು ಮೃತಪಟ್ಟಿವೆ. ಈ ನಡುವೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಶೀಘ್ರ ದುಷ್ಕರ್ಮಿಗಳನ್ನು ಬಂಧಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಮಲೆ ಮಹದೇಶ್ವರರ ವಾಹನವೆಂದೇ ಪೂಜಿಸುವ ಹುಲಿಯನ್ನು ಬೆಟ್ಟದ ಸನ್ನಿಧಿಯಲ್ಲೇ ತಾಯಿ ಹುಲಿ ಸೇರಿದಂತೆ ಐದು ಹುಲಿಗಳು ಮೃತಪಟ್ಟಿರುವುದು ಅತ್ಯಂತ ಆಘಾತಕಾರಿ ವಿಷಯವಾಗಿದೆ. ಭಕ್ತರ ಮನಸ್ಸಿಗೆ ಘಾಸಿ ತರಿಸಿರುವ ಘಟನೆಯಾಗಿದೆ ಎಂದು ಆಶ್ರೋಕ ವ್ಯಕ್ತಪಡಿಸಿದ್ದಾರೆ.

ಹುಲಿಗಳ ಸಾವಿಗೆ ವಿಷ ಪ್ರಾಶನವಾಗಿದ್ದರೆ ಅದು ಅತ್ಯಂತ ಹೇಯ ಹಾಗೂ ಖಂಡನೀಯ. ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಸರ್ಕಾರ ರಚಿಸಿರುವ ತನಿಖಾ ತಂಡ ಶೀಘ್ರ ಸತ್ಯಾಂಶವನ್ನು ಬಯಲಿಗೆಳೆದು ದುಷ್ಕರ್ಮಿಗಳನ್ನು ಬಂಧಿಸಲಿ ಎಂದು ವಿಜಯೇಂದ್ರ ಹೇಳಿದ್ದಾರೆ.
.ಹಿಂದಿ, ತ್ರಿಭಾಷಾ ಸೂತ್ರ ಹೇರಿಕೆ: ಉದ್ಧವ್, ರಾಜ್ ಠಾಕ್ರೆ ಜಂಟಿ ಪ್ರತಿಭಟನೆ.JSK ಚಿತ್ರಕ್ಕೆ CBFC ತಡೆ ವಿರೋಧಿಸಿ ಕೇರಳ ಚಿತ್ರರಂಗದ ಗಣ್ಯರಿಂದ ಪ್ರತಿಭಟನೆ.
'ಮನು ಕುಲದ ಅಸ್ತಿತ್ವ ವನ್ಯಜೀವಿ ಪ್ರಾಣಿಗಳ ಸಂರಕ್ಷಣೆಯಲ್ಲಿದೆ' ಎಂಬ ಅರಿವು ಇನ್ನಷ್ಟು ವ್ಯಾಪಿಸಬೇಕಿದೆ, ಕಾಡಂಚಿನಲ್ಲಿ ವಾಸಿಸುವ ಜನರಲ್ಲಿ ಅರಣ್ಯ ಹಾಗೂ ವನ್ಯ ಜೀವಿಗಳ ಸಂರಕ್ಷಣೆಯ ಕುರಿತು ಅರಿವಿನ ಜಾಗೃತಿಯ ಕಾರ್ಯಕ್ರಮ ಕೈಗೊಳ್ಳಬೇಕಿದೆ. ಪ್ರತಿಯೊಂದು ವನ್ಯಜೀವಿಯೂ ಮನುಷ್ಯ ಸಮಾಜದ ಸ್ನೇಹಜೀವಿ ಹಾಗೂ ದೇಶದ ಸಂಪತ್ತು ಎಂಬ ನಿಟ್ಟಿನಲ್ಲಿ ವ್ಯಾಪಕ ಪ್ರಚಾರಾಂದೋಲನವನ್ನು ಸರ್ಕಾರ ಆರಂಭಿಸಲಿ ಎಂದು ವಿಜಯೇಂದ್ರ ತಿಳಿಸಿದ್ದಾರೆ.

ಹುಲಿ ಸಂತತಿ ಕರ್ನಾಟಕ ರಾಜ್ಯದ ಅರಣ್ಯ ಪ್ರದೇಶದ ಹೆಮ್ಮೆಯ ಹೆಗ್ಗುರುತಾಗಿದೆ. ಹುಲಿಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆ, ಈ ನಿಟ್ಟಿನಲ್ಲಿ ಸರ್ಕಾರ ಹುಲಿ ಸಂರಕ್ಷಣೆಗಾಗಿ ಕೇಂದ್ರ ಸರ್ಕಾರದ ಯೋಜನೆಯನ್ನು ಬಳಸಿಕೊಂಡು ವಿಶೇಷ ಆದ್ಯತೆಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಅಲ್ಲದೇ ಹುಲಿಗಳ ಸಂರಕ್ಷಣೆ ಹಾಗೂ ಸುರಕ್ಷತೆಯತ್ತ ವಿಶೇಷ ಕಾಳಜಿ ವಹಿಸಬೇಕು ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ
.PV Cine Sammana-3: ಕೃಷ್ಣಂ ಪ್ರಣಯ ಸಖಿ ಅತ್ಯುತ್ತಮ ಚಿತ್ರ; ದುನಿಯಾ ವಿಜಯ್, ಅಂಕಿತಾಗೆ ಪ್ರಶಸ್ತಿ.ಚಾಮರಾಜನಗರ | ವಿಷಪ್ರಾಶನದಿಂದ ಹುಲಿಗಳ ಸಾವು: ಸಿಸಿಎಫ್.ಕೋಲ್ಕತ್ತ | ಕಾನೂನು ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಮೂವರ ಬಂಧನ.‘ಮೈಸಾ’ ಚಿತ್ರದ ಫಸ್ಟ್ ಲುಕ್ ಬಿಡುಗಡೆ: ವಿಭಿನ್ನ ಅವತಾರದಲ್ಲಿ ರಶ್ಮಿಕಾ ಮಂದಣ್ಣ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.