ಚಾಮರಾಜನಗರ: ಹನೂರು ತಾಲೂಕಿನ ಮಲೆ ಮಹದೇಶ್ವರ ವನ್ಯಧಾಮದ ಹೂಗ್ಯಂ ವನ್ಯಜೀವಿ ವಲಯದ ಮೀಣ್ಯಂನಲ್ಲಿ ತಾಯಿ ಹುಲಿ ಹಾಗೂ ನಾಲ್ಕು ಹುಲಿ ಮರಿಗಳು ಅಸಹಜವಾಗಿ ಮೃತಪಟ್ಟಿವೆ.

ಬುಧವಾರ ಹುಲಿಗಳ ಮೃತದೇಹಗಳು ಪತ್ತೆಯಾಗಿದ್ದು ಮೇಲ್ನೋಟಕ್ಕೆ ವಿಷಪ್ರಾಶನದಿಂದ ಹುಲಿಗಳು ಮೃತಪಟ್ಟಿರಬಹುದು ಎಂದು ಅರಣ್ಯಾಧಿಕಾರಿಗಳು ಶಂಕಿಸಿದ್ದಾರೆ.

ಘಟನಾ ಸ್ಥಳಕ್ಕೆ ಹಿರಿಯ ಅರಣ್ಯ ಬೇಟಿ ನೀಡಿದ್ದಾರೆ.

ತನಿಖೆಗೆ ಖಂಡ್ರೆ ಆದೇಶ: ನಾಲ್ಕು ಹುಲಿಗಳ ಅಸಹಜ ಸಾವಿನ ಪ್ರಕರಣದ ತನಿಖೆಗೆ ಪಿಸಿಸಿಎಫ್ ನೇತೃತ್ವದಲ್ಲಿ ತಂಡ ರಚಿಸಿ ತನಿಖೆ ನಡೆಸಬೇಕು. ಅರಣ್ಯ ಇಲಾಖೆ ಸಿಬ್ಬಂದಿ ನಿರ್ಲಕ್ಷ್ಯ ಇದ್ದರೆ ಅವರ ವಿರುದ್ಧ ಅಥವಾ ವಿದ್ಯುತ್ ಸ್ಪರ್ಶ, ವಿಷಪ್ರಾಶನದಿಂದ ಮೃತಪಟ್ಟಿದ್ದರೆ ಅದಕ್ಕೆ ಕಾರಣರಾಗಿರುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಹಾಗೂ ಮೂರು ದಿನಗಳ ಒಳಗೆ ತನಿಖಾ ವರದಿ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಸಚಿವ ಈಶ್ವರ ಖಂಡ್ರೆ ಆದೇಶ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.