ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಿದ್ದರಾಮಯ್ಯ ಮನೆಗೆ ಹೋಗುವ ಕಾಲ ಸನ್ನಿಹಿತ: ಯಡಿಯೂರಪ್ಪ ಟೀಕೆ

Published 9 ಆಗಸ್ಟ್ 2024, 6:28 IST
Last Updated 9 ಆಗಸ್ಟ್ 2024, 6:28 IST
ಅಕ್ಷರ ಗಾತ್ರ

ಮೈಸೂರು: ‘ರಾಜಕಾರಣದಿಂದ ಯಾರು ನಿವೃತ್ತಿ ಆಗುತ್ತಾರೆ ಎಂಬುದು ಕೆಲವೇ ದಿನಗಳಲ್ಲಿ ಗೊತ್ತಾಗಲಿದೆ. ಸಿದ್ದರಾಮಯ್ಯ ಮನೆಗೆ ಹೋಗುವ ಕಾಲ ಹತ್ತಿರವಾಗಿದೆ’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಟೀಕಿಸಿದರು.

ಚಾಮುಂಡಿ ಬೆಟ್ಟದಲ್ಲಿ ಶುಕ್ರವಾರ ದೇವರಿಗೆ ಪೂಜೆ ಸಲ್ಲಿಸಿದ ಸಂದರ್ಭ ಪತ್ರಕರ್ತರ ಜೊತೆ ಅವರು ಮಾತನಾಡಿದರು.

ಯಡಿಯೂರಪ್ಪ ನಿವೃತ್ತಿ ಘೋಷಣೆ ಮಾಡಬೇಕು ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ‘ಮನೆಗೆ ಹೋಗುವ ಕಾಲ ಹತ್ತಿರ ಬಂದಾಗ ಅವರು ಇನ್ನೊಬ್ಬರ ಬಗ್ಗೆ ಹೇಳುವುದು ಸ್ವಾಭಾವಿಕ. ಮುಂದೆ ಯಾರು ನಿವೃತ್ತರಾಗುತ್ತಾರೆ. ನ್ಯಾಯಾಲಯಗಳಲ್ಲಿ ಏನೆಲ್ಲ ಆಗುತ್ತದೆ ಎಂಬುದು ಗೊತ್ತಾಗಲಿದೆ. ಆಗ ಯಾರು ನಿವೃತ್ತಿ ಆಗಬೇಕು ಎಂಬುದನ್ನು ತೀರ್ಮಾನ ಮಾಡೋಣ’ ಎಂದರು.

‘ ಈ ದೇಶದ ಇತಿಹಾಸದಲ್ಲಿ ಒಬ್ಬ ಮುಖ್ಯಮಂತ್ರಿ ತಮ್ಮ ಮನೆಯವರಿಗೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಬೆಲೆ ಬಾಳುವ ನಿವೇಶನ ಕೊಟ್ಟ ಉದಾಹರಣೆ ಇದೆಯೇ? ಸ್ವಂತ ಹೆಂಡತಿಗೆ ಸೈಟು ಕೊಟ್ಟಿರುವುದು ಅಕ್ಷಮ್ಯ ಅಪರಾಧ’ ಎಂದರು.

‘ನನ್ನ ವಿರುದ್ಧದ ಪೋಕ್ಸೊ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ತೀರ್ಮಾನ ಆದ ಬಳಿಕ ಸತ್ಯ ಸಂಗತಿ ಬಹಿರಂಗ ಆಗುತ್ತದೆ. ಅಲ್ಲಿಯವರೆಗೂ ನಾನು ಏನನ್ನೂ ಮಾತನಾಡುವುದಿಲ್ಲ. ಅಲ್ಲಿಯೇ ಸಿದ್ದರಾಮಯ್ಯ ಅವರಿಗೆ ತಕ್ಕ ಉತ್ತರ ಸಿಗಲಿದೆ’ ಎಂದು ತಿರುಗೇಟು ನೀಡಿದರು.

‘ಬಿಜೆಪಿ–ಜೆಡಿಎಸ್ ಹಮ್ಮಿಕೊಂಡಿರುವ ಜನಾಕ್ರೋಶ ಯಾತ್ರೆಯು ಇತಿಹಾಸದಲ್ಲೇ ಐತಿಹಾಸಿಕ ಪಾದಯಾತ್ರೆ. ಭ್ರಷ್ಟ ಸರ್ಕಾರ ಕಿತ್ತೊಗೆಯಲು ವಿಜಯೇಂದ್ರ ನೇತೃತ್ವದಲ್ಲಿ ಈ ಪಾದಯಾತ್ರೆ ನಡೆದಿದೆ. ಜನರಿಂದ ನಿರೀಕ್ಷೆಗೂ ಮೀರಿ ಪ್ರತಿಕ್ರಿಯೆ ವ್ಯಕ್ತವಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT