ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಟಿಪ್ಪು’ ಎಕ್ಸ್‌ಪ್ರೆಸ್‌ ಇನ್ನು ‘ಒಡೆಯರ್‌’ ಎಕ್ಸ್‌ಪ್ರೆಸ್: ರೈಲ್ವೆ ಮಂಡಳಿ ಆದೇಶ

Last Updated 7 ಅಕ್ಟೋಬರ್ 2022, 14:20 IST
ಅಕ್ಷರ ಗಾತ್ರ

ಮೈಸೂರು: ಮೈಸೂರು– ಬೆಂಗಳೂರು ನಡುವೆ ಸಂಚರಿಸುತ್ತಿರುವ ‘ಟಿಪ್ಪು ಎಕ್ಸ್‌ಪ್ರೆಸ್‌’ ರೈಲಿನ ಹೆಸರನ್ನು ‘ಒಡೆಯರ್ ಎಕ್ಸ್‌ಪ್ರೆಸ್‌’ ಎಂದು ಬದಲಾಯಿಸಿ ಕೇಂದ್ರ ರೈಲ್ವೆ ಮಂಡಳಿ ಶುಕ್ರವಾರ ಆದೇಶ ಹೊರಡಿಸಿದೆ.

ಮೈಸೂರು– ತಾಳಗುಪ್ಪ ಎಕ್ಸ್‌ಪ್ರೆಸ್‌ ರೈಲಿಗೆ ‘ಕುವೆಂಪು ಎಕ್ಸ್‌ಪ್ರೆಸ್‌’ ಎಂದು ನಾಮಕರಣ ಮಾಡಿರುವುದಾಗಿ ಮಂಡಳಿಯ ಉಪನಿರ್ದೇಶಕ ರಾಜೇಶ್‌ ಕುಮಾರ್‌ ನೈರುತ್ಯ ರೈಲ್ವೆ ವ್ಯವಸ್ಥಾಪಕರಿಗೆ ಪತ್ರ ಬರೆದಿದ್ದಾರೆ.

ರೈಲ್ವೆ ಸಚಿವಾಲಯ ಆದೇಶ ಪ್ರತಿಯನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಸಂಸದ ಪ್ರತಾಪಸಿಂಹ, ‘ಇನ್ನು ಮುಂದೆ ‘ಟಿಪ್ಪು ಎಕ್ಸ್‌ಪ್ರೆಸ್’ ಬದಲು ‘ಒಡೆಯರ್ ಎಕ್ಸ್‌ಪ್ರೆಸ್’ ನಿಮಗೆ ಸೇವೆ ಒದಗಿಸಲಿದೆ. ಜತೆಗೆ, ‘ಮೈಸೂರು-ತಾಳಗುಪ್ಪ’ ಬದಲು ‘ಕುವೆಂಪು ಎಕ್ಸ್‌ಪ್ರೆಸ್’ ಆಗಿ ಬದಲಾಗಲಿದೆ. ಇದಕ್ಕೆ ಕಾರಣರಾದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌, ಸಚಿವ ಪ್ರಲ್ಹಾದ ಜೋಶಿ ಹಾಗೂ ಕುವೆಂಪು ಹೆಸರು ಸೂಚಿಸಿದ ಡಿ.ಪಿ.ಸತೀಶ್‌ ಅವರಿಗೆ ಧನ್ಯವಾದ’ ಬರೆದುಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT