ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಿರುಮಲ: 384 ಕೊಠಡಿಗಳಿರುವ ವಸತಿಗೃಹ ಡಿಸೆಂಬರ್‌ಗೆ ಪೂರ್ಣ

Published 27 ಜುಲೈ 2023, 0:23 IST
Last Updated 27 ಜುಲೈ 2023, 0:23 IST
ಅಕ್ಷರ ಗಾತ್ರ

ಬೆಂಗಳೂರು: ತಿರುಪತಿಯ ತಿರುಮಲದಲ್ಲಿ ಕರ್ನಾಟಕ ಯಾತ್ರಿಗಳಿಗೆ ನಿರ್ಮಿಸುತ್ತಿರುವ ವಸತಿ ಗೃಹ ಹಾಗೂ ಕಲ್ಯಾಣ ಮಂಟಪದ ಕಾಮಗಾರಿಗಳನ್ನು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ, ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್‌ ಕಟಾರಿಯಾ, ಆಯುಕ್ತ ಬಸವರಾಜೇಂದ್ರ ಪರಿಶೀಲಿಸಿದರು.

ರಾಜ್ಯ ಸರ್ಕಾರ ತಿರುಮಲದಲ್ಲಿ ₹ 220 ಕೋಟಿ ವೆಚ್ಚದಲ್ಲಿ ಕಲ್ಯಾಣ ಮಂಟಪ, 384 ಕೊಠಡಿಗಳಿರುವ ವಸತಿಗೃಹ ನಿರ್ಮಿಸಲಾಗುತ್ತಿದೆ. ಡಿಸೆಂಬರ್‌ ಒಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.

ನಂತರ ತಿರುಮಲದಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯದ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ತಿರುಪತಿ ತಿರುಮಲ ದೇವಸ್ಥಾನದ ಅಧಿಕಾರಿ ಧರ್ಮೇಂದ್ರ ರೆಡ್ಡಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT